ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳುಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ ಇಂದು ಮೆಗ್ಗಾನ್ ಆಸ್ಪತ್ರೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ವಿಚಾರಿಸಿದ್ದಾರೆ.
ನಿನ್ನೆ ರಾತ್ರಿ ಈದ್ ಮೀಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು. ಈ ಹಿನ್ನೆಲೆಯಲ್ಲಿ 7 ಜನ ಗಾಯಗೊಂಡಿದ್ದರು. ರೋಹನ್, ಧನಂಜಯ್, ಮಾರುತಿ, ಪ್ರದೀಪ್, ಕಿರಣ್, ಭರತ್, ಶಾಂತಮ್ಮಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಗ್ಯ ವಿಚಾರಿಸಿದ ಬಳಿಕ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ನಡೆದ ಮುಸಲ್ಮಾನರ ಮೆರವಣಿಗೆ ರಾಜ್ಯ ಸರ್ಕಾರ ತಲೆ ತಗ್ಗಿಸಬೇಕು. ಮೆರವಣಿಗೆಯಲ್ಲಿ ಕೈಯಲ್ಲಿ ತಲ್ವಾರ್ ಹಿಡಿದುಕೊಂಡು ಹೋಗಿದ್ದರು. ಇದು ಯಾರಿಗೆ ಎಚ್ಚರಿಕೆ ಹಿಂದೂ ಸಮಾಜದವರಿಗಾ? ಪೊಲೀಸರು ಹೆದರಿ ಹೋಗಿದ್ದಾರೆ ಈ ಸರ್ಕಾರದಿಂದ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.