ಮೈಸೂರು : ನಾಳೆ ಆಷಾಢ ಶುಕ್ರವಾರ ಈ ಹಿನ್ನೆಲಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದತ್ತ ಭಕ್ತಾಧಿಗಳು ಧಾವಿಸೋದು ಸಾಮಾನ್ಯ. ಹೀಗಾಗಿ ಭಕ್ತಾದಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನೇಕ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಡಾ.ರಾಜೇಂದ್ರ ಮತ್ತು ನಗರದ ಪೆÇಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಭಕ್ತಾದಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನೇಕ ವ್ಯವಸ್ಥೆ ಮಾಡಲಾಗಿದ್ದು, ನಗರದ ಲಲಿತಮಹಲ್ ಹೆಲಿಪ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಾ ಮಹಲ್ ಪ್ಯಾಲೇಸ್ ನ ಹೆಲಿಪ್ಯಾಡ್ ನಲ್ಲಿ ವಾಹನಗಳಿಗೆ ಪಾಕಿರ್ಂಗ್ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 50 ರೂ. ಮತ್ತು 300 ರೂಪಾಯಿ ಟಿಕೆಟ್ ವಿತರಣೆ ಮಾಡಲಾಗುತ್ತದೆ. ಪ್ಲಾಸ್ಟಿಕ್ ಮುಕ್ತವಾದ ಆಷಾಡಮಾಸ ಆಚರಣೆ ಮಾಡಲು ಸಿದ್ಧತೆ ನಡೆಸಲಾಗಿದ್ದು, ಎಲ್ಲಂದರಲ್ಲಿ ಪ್ಲಾಸ್ಟಿಕ್ ಬಿಸಾಡಿದವರಿಗೆ ದಂಡ ಬೀಳಲಿದೆ. ಮೆಟ್ಟಿಲುಗಳು ಮತ್ತು ದೇವಸ್ಥಾನ ಸೇರಿದಂತೆ ಅನೇಕ ಭಾಗಗಳಲ್ಲಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ. ಚಾಮುಂಡಿ ಬೆಟ್ಟಕ್ಕೆ ಹೊರಡುವ ಸಾರ್ವಜನಿಕರ ವಾಹನಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಬಸ್ ನಲ್ಲಿ ಮಾತ್ರ ಪ್ರಯಾಣ ಮಾಡಬೇಕು ಎಂದು ತಿಳಿಸಿದರು.