ಬೆಂಗಳೂರು : ಕರ್ನಾಟಕದಲ್ಲಿ ವಿದ್ಯುತ್ ಕೊರತೆಯಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಿರಂತರ 5 ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಲೋಡ್ ಶೆಡ್ಡಿಂಗ್ ಸಮಸ್ಯೆಯಿಂದಾಗಿ ರಾಜ್ಯದ ರೈತರು ಸಂಕಷ್ಟಕ್ಕೆ ಒಳಾಗುತ್ತಿದ್ದಾರೆ ಅದರಲ್ಲೂ ರೈತರ ನೀರಾವರಿ ಪಂಪ್ ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಈ ಹಿಂದಿನ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆಯಾಗಲಿಲ್ಲ ಇದರ ಪರಿಣಾಮವಾಗಿ ವಿದ್ಯುತ್ ಸಮಸ್ಯೆ ಎದುರಾಗುತ್ತಿದೆ.
ಈಗಾಗಲೇ ಲೋಡ್ ಶೆಡ್ಡಿಂಗ್ ಸಮಸ್ಯೆ ಹಿನ್ನೆಲೆ ವಿದ್ಯುತ್ ಖರೀದಿ ಮಾಡುವಂತೆ ಸೂಚನೆ ನೀಡಿದ್ದೇನೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚಿಸಿದ್ದೇವೆ. ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ. ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರೀ ಫೇಸ್ ವಿದ್ಯುತ್ ಕೊಟ್ಟರೆ ಸಾಕು, ನಿರಂತರ ಐದು ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೇನೆಎಂದು ಸಿಎಂ ತಿಳಿಸಿದ್ದಾರೆ.