Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political News

ಟ್ಯಾಬ್ಲೋ ಕಡೆಗಣನೆ ಮಾಡಿದ್ದು, ಕರ್ನಾಟಕಕ್ಕೆ ಅನ್ಯಾಯ, ಅಪಮಾನ : ಸಿಎಂ ಸಿದ್ದರಾಮಯ್ಯ

ದೆಹಲಿ : ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್​ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಅನ್ಯಾಯ, ಅಪಮಾನವಿದು, ಹಿಂದೆಯೂ ಇದೆ ರೀತಿ ಮಾಡಿದ್ದರು. ಈಗಾಗಲೇ ಪತ್ರ ಬರೆದಿದ್ದೇನೆ. ಮತ್ತೊಮ್ಮೆ ಪತ್ರ ಬರೆಯುತ್ತೇನೆ ಎಂದಿದ್ದಾರೆ ಅಲ್ಲದೇ, ಈ ಬಗ್ಗೆ ಟ್ವೀಟ್ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದರು.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!