ನವದೆಹಲಿ : ನವೆಂಬರ್ 19 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಗ್ರ್ಯಾಂಡ್ ಫೈನಲ್ ಕ್ರಿಕೆಟ್ ಪಂದ್ಯ ನಡೆಯಲಿದೆ.
ವಿಶ್ವದ ಅತಿ ದೊಡ್ಡ ಕ್ರೀಡಾಂಗಣ ವಿಶ್ವ ಕ್ರಿಕೆಟ್ನ ಮಹತ್ವದ ಪಂದ್ಯಕ್ಕೆ ಸಾಕ್ಷಿಯಾಗಲು ಸಿದ್ಧವಾಗಿದೆ. ಟೀಂ ಇಂಡಿಯಾ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇದುವರೆಗೆ 19 ಪಂದ್ಯಗಳನ್ನು ಆಡಿದೆ.
ಇದರಲ್ಲಿ 11 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದ್ದರೆ, 8 ಪಂದ್ಯಗಳಲ್ಲಿ ಸೋಲಿನ ಶಾಕ್ ಎದುರಿಸಿದೆ. ಇನ್ನು ಈ ಮೈದಾನದಲ್ಲಿ ಭಾರತ ಮೂರು ಏಕದಿನ ವಿಶ್ವಕಪ್ ಪಂದ್ಯಗಳನ್ನು ಆಡಿದ್ದು, ಆಡಿರುವ ಅಷ್ಟೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.