ಬೆಂಗಳೂರು : ಈ ಹಿಂದೆ ಇತಿಹಾಸದಲ್ಲಿ ಇರೋದನ್ನ ಹೇಳಿದ್ದಾರೆ. ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಯಾವ ಯಾವ ಜಿಲ್ಲೆಗಳು ಇದ್ದವು ಅನ್ನೋದು ಗೊತ್ತಿದೆ.ಆ ಕಾರಣದಿಂದ ಅವರು ಹೇಳಿರಬಹುದು ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಅರ್ಥ ಮಾಡಿಕೊಳ್ಳಿ. ಹೈದರಾಬಾದ್ಗೆ ಹಿಂದೆ ನಿಜಾಮರ ಕಾಲದಲ್ಲಿ ಬಳ್ಳಾರಿ ಸೇರಿ ಕೆಲ ಜಿಲ್ಲೆಗಳು ಇದ್ವು. ವಿಜಯಪುರ, ಬೆಳಗಾವಿ, ಕಾರವಾರ, ಮುಂಬೈ ರಾಜ್ಯದಲ್ಲಿತ್ತು. ಈ ಅರ್ಥದಲ್ಲಿ ಅವರು ಹೇಳಿದ್ದಾರೆ ಇದು ಸತ್ಯ. ರಾಜ್ಯಗಳ ಪುನರ್ ವಿಂಗಡಣಾ ಬಳಿಕ ಎಲ್ಲವೂ ಸರಿಹೋಗಿದೆ. ರಾಜ್ಯಗಳ ಗಡಿ ವಿಚಾರದಲ್ಲಿ ನಮಗೆ ಮಹಾಜನ್ ವರದಿ ಅಂತಿಮ. ಈ ಹಿಂದೆ ಇತಿಹಾಸದಲ್ಲಿ ಇರೋದನ್ನ ಹೇಳಿದ್ದಾರೆ.
ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಯಾವ ಯಾವ ಜಿಲ್ಲೆಗಳು ಇದ್ದವು ಅನ್ನೋದು ಗೊತ್ತಿದೆ. ಆ ಕಾರಣದಿಂದ ಅವರು ಹೇಳಿರಬಹುದು. ರಾಜ್ಯ ಪುನರ್ ವಿಂಗಡಣೆ ಆದ್ಮೇಲೆ ಎಲ್ಲವೂ ಬದಲಾಗಿದೆ. ಎಲ್ಲಾ ಗಡಿ ವಿವಾದಕ್ಕೆ ಮಹಾಜನ್ ವರದಿ ಅಂತಿಮ. ಈ ವಿಚಾರದಲ್ಲಿ ನಮ್ಮ ರಾಜ್ಯದ ನಿಲುವು ಕೂಡ ಬಹಳ ಸ್ಪಷ್ಟವಾಗಿದೆ ಎಂದರು. ಮೂರು ಡಿಸಿಎಂ ವಿಚಾರವಾಗಿ ಮಾತನಾಡಿ ಹೈಕಮಾಂಡ್ ಇದೆಲ್ಲವನ್ನು ಗಮನಿಸುತ್ತದೆ. ರಹೀಮ್ ಖಾನ್ ಮುಸ್ಲಿಂ ಸಮುದಾಯಕ್ಕೆ ಡಿಸಿಎಂ ಕೇಳಿರೋದು ತಪ್ಪೇನಿದೆ. ಅವರ ಸಮುದಾಯಕ್ಕೆ ಬೇಕು ಅಂತ ಕೇಳಿದ್ದಾರೆ. ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ.
ನಮ್ಮ ಅಭಿಪ್ರಾಯ ಏನಿದ್ದರೂ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧ. ಉಪ ಮುಖ್ಯಮಂತ್ರಿ ಮಾಡಬೇಕೋ ಬೇಡವೋ. ಎಷ್ಟು ಮಾಡಬೇಕು ಯಾವ ಯಾವ ವರ್ಗಕ್ಕೆ ಮಾಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹಿಂದೆ ಮಾಡುವ ಸಂದರ್ಭದಲ್ಲಿ ಒಂದೇ ಡಿಸಿಎಂ ಅಂತ ತೀರ್ಮಾನ ಮಾಡಿದ್ರು. ಈಗ ಕೆಲ ಬೇಡಿಕೆಗಳನ್ನು ನಾನು ಕೂಡ ಗಮನಿಸಿದ್ದೇನೆ. ನನ್ನ ಅಭಿಪ್ರಾಯವನ್ಮ ಪಕ್ಷದ ನಾಲ್ಕು ಗೋಡೆ ಮಧ್ಯೆ ಹೇಳುತ್ತೇನೆ. ನನ್ನ ಅಭಿಪ್ರಾಯವನ್ನು ಮಾಧ್ಯಮಗಳ ಮುಂದೆ ಹೇಳಲ್ಲ. ಪಕ್ಷದ ನಾಲ್ಕು ಗೋಡೆ ಮಧ್ಯೆ ಹೇಳುತ್ತೇನೆ ಎಂದು ಹೇಳಿದರು.
ವರದಿ : ಬಸವರಾಜ ಹೂಗಾರ