Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ತುಮಕೂರು ಕ್ಷೇತ್ರದ ಟಿಕೆಟ್‌ಗೆ ಮಾಧುಸ್ವಾಮಿ ಫೈಟ್..!

ಬೆಂಗಳೂರು : ತುಮಕೂರು ಬಿಜೆಪಿ ಟಿಕೆಟ್​ಗೆ ಮಾಜಿ ಸಚಿವ ಮಾಧುಸ್ವಾಮಿ ಪೈಪೋಟಿ ನಡೆಸಿದ್ದಾರೆ. ಮಾಜಿ ಸಚಿವ ವಿ ಸೋಮಣ್ಣ ಸಹ ತುಮಕೂರು ಕ್ಷೇತ್ರದಿಂದ ಸ್ಪರ್ಧೆಗೆ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಹೀಗಾಗಿ ಈ ವಿದ್ಯಮಾನ ರಾಜ್ಯ ಬಿಜೆಪಿಯಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದ ಸೋಮಣ್ಣ ಕಳೆದ ವಾರ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಅವರು ಹೈಕಮಾಂಡ್‌ನಿಂದ ಲೋಕಸಭೆ ಟಿಕೆಟ್‌ಗೆ ಬೇಡಿಕೆ ಇಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ರಾಜ್ಯಸಭಾ ಟಿಕೆಟ್ ಕೇಳಿರುವುದಾಗಿ ಹೇಳಿದ್ದರು. ಆದರೆ, ಕಠಿಣವಾದ ಮೂರು ಲೋಸಕಭೆ ಕ್ಷೇತ್ರಗಳನ್ನು ಕೊಡಿ ಗೆಲ್ಲಿಸಿಕೊಂಡು ಬರುವೆ ಎಂದು ಹೈಕಮಾಂಡ್​ಗೆ ತಿಳಿಸಿದ್ದರು.

ಸೋಮಣ್ಣ ಘೋಷಣೆ ಬಳಿಕ ಮಾಧುಸ್ವಾಮಿ ಬಿಜೆಪಿಯಿಂದ ಲೋಕಸಭೆ ಪಡೆಯುವ ಆಕಾಂಕ್ಷಿಯಾಗಿದ್ದಾರೆ. ಕೆಲವು ವರದಿಗಳ ಪ್ರಕಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಮಾಧುಸ್ವಾಮಿಗೆ ಬೆಂಬಲ ನೀಡಿದ್ದಾರೆ.

ಮಾಜಿ ಸಚಿವರು ಟಿಕೆಟ್‌ಗಾಗಿ ಹರಸಾಹಸ ಪಡುತ್ತಿದ್ದರೂ ಬಿಜೆಪಿ ಮುಖಂಡರಿಗೇ ತುಮಕೂರಿನಿಂದ ಟಿಕೆಟ್ ಸಿಗುತ್ತದೆಯೇ ಎಂಬುದು ಖಚಿತವಾಗಿಲ್ಲ. ಎನ್​ಡಿಎ ಸೇರಿರುವ ಜೆಡಿಎಸ್ ಕನಿಷ್ಠ ನಾಲ್ಕು ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಅದರಲ್ಲಿ ತುಮಕೂರು ಸಹ ಒಂದಾಗಿರಬಹುದು ಎಂದು ಭಾವಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!