ಬೆಂಗಳೂರು : ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆ ಇಡೇರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ಸೋಮವಾರದಿಂದ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು ಸಿಡಿದೆದ್ದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರು ನಗರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸುಂತೆ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತರು ಒತ್ತಾಯಿಸಿದ್ದರು.
ಕಳೆದ 3- 4 ವರ್ಷಗಳಿಂದ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನಲೆ ಸೋಮವಾರ ಪ್ರತಿಭಟನೆಗೆ ಕರೆ ನೀಡಿದ್ದಾರೆ. ನಮ್ಮ ಮನವಿಗೆ ಸ್ಪಂದನೆ ದೊರೆಯದೆ ಹೋದರೆ ಅನಿರ್ದಿಷ್ಟವಾದಿ ಪ್ರತಿಭಟನೆ ನಡೆಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ AITUC ಮನವಿ ಪತ್ರ ಬರೆದಿದ್ದು ನ.6ಕ್ಕೆ ಮುಷ್ಕರ ನಡೆಸೋದಕ್ಕೆ ಮುಂದಾಗಿದ್ದಾರೆ.
ಈ ಬಾರೀ ಬಿಸಿಲು, ಚಳಿ, ಗಾಳಿ ಎನ್ನದೇ ರಾತ್ರಿ ಪೂರ್ತಿ ಫ್ರೀಡಂ ಪಾರ್ಕ್ ನಲ್ಲಿ ಬಿಸಿಯೂಟ ಮಹಿಳಾ ಕಾರ್ಯಕರ್ತರು ರೋಡಿಗಿಳಿದು ಪ್ರತಿಭಟನೆ ನಡೆಸಲಿದ್ದಾರಾ ಅನ್ನೋದನ್ನು ಕಾದು ನೋಡಬೇಕಾಗಿದೆ ಈ ಹಿಂದೆಯೂ ಹಲವು ಬಾರಿ ರಸ್ತೆಯಲ್ಲೆಕಾರ್ಯಕರ್ತರು ಮಲಗಿ ಪ್ರತಿಭಟನೆ ನಡೆಸಿದ್ದು ಬೆಳಕಿಗೆ ಬಂದಿದೆ.