ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಪಿಲ್ಲ ಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಭದ್ರತೆ ಹಾಗೂ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ
ಹೊಸಕೋಟೆ ಇಂಡಸ್ಟ್ರೀಸ್ ವೆಲ್ಫೇರ್ ಫಾರಂ ವತಿಯಿಂದ ಗಸ್ತು ವಾಹನ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಸ್ತಾಂತರ ಮಾಡಲಾಗಿದೆ.
ಹೊಸಕೋಟೆ ಇಂಡಸ್ಟ್ರೀಸ್. ವೆಲ್ಫೇರ್ ಫಾರಂ ವತಿಯಿಂದ ಸುಮಾರು 10 ಲಕ್ಷ ಬೆಲೆಬಾಳುವ ಬುಲೆರೋ ವಾಹನವನ್ನು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಲದಂಡಿಯವರಿಗೆ ಹಸ್ತಾಂತರ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ, ಹೊಸಕೋಟೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಗಾರಿಕಾ ಪ್ರದೇಶ ತುಂಬಾ ದೊಡ್ಡ ಹಾಗೂ ತುಂಬಾ ಹಳೆಯ ಕೈಗಾರಿಕಾ ಪ್ರದೇಶವಾಗಿದೆ.
ಈ ಕೈಗಾರಿಕಾ ಪ್ರದೇಶದಲ್ಲಿ ತುಂಬಾ ಅಕ್ರಮ ಚಟುವಟಿಕೆ ಹಾಗೂ ಕಳ್ಳತನ ಪ್ರಕರಣಗಳು
ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ನಿರಂತರ 24/7 ಸ್ಥಳೀಯ ಕೈಗಾರಿಕಾ ಪ್ರದೇಶಗಳಿಗೆ ಸಿಬ್ಬಂದಿಗಳ ನಿಯೋಜನೆ ಮಾಡುತ್ತೇವೆ. ಗಸ್ತು ವಾಹನ ಗಸ್ತು ತಿರುಗುವುದರಿಂದ ಅಪರಾಧ ಕೃತ್ಯಗಳು ಕಡಿಮೆಯಾಗುತ್ತದೆ. ಈ ಮೂಲಕ ಸ್ಥಳೀಯ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಲದಂಡಿ ಒತ್ತಾಯಿಸಿದ್ದಾರೆ.
ಒಟ್ಟಾರೆಯಾಗಿ ಸ್ಥಳೀಯ ಕಾರ್ಖಾನೆ ಮಾಲೀಕರು ಹಾಗೂ ಪೊಲೀಸರ ಒಂದು ಒಳ್ಳೆಯ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘಿಸಿದ್ದಾರೆ.