ಬೆಂಗಳೂರು : ರಾಜ್ಯವನ್ನು ವಿಭಜಿಸಿ ಆಳಿದ ಮಾದರಿಯಲ್ಲಿ ಸಿಎಂ ಸಿದ್ದರಾಮಯ್ಯನವರು ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು MLC Ravi Kumar ಎನ್.ರವಿಕುಮಾರ್ ಹೇಳಿದ್ದಾರೆ.
ಹಿಜಾಬ್ (Hijab) ವಿಷಯ ಇದೀಗ ಸುಪ್ರೀಂ ಕೋರ್ಟಿನಲ್ಲಿದೆ. ಇಂತಹ ಸಂದರ್ಭದಲ್ಲಿ ಹಿಜಾಬ್ಗೆ ಅನುಮತಿ ಕೊಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು. ಹಿಜಾಬ್ ಧರಿಸಬಾರದು, ಸಮವಸ್ತ್ರ ಧರಿಸಿ ಹೋಗಬೇಕೆಂದು ಹೈಕೋರ್ಟಿನಿಂದ ತೀರ್ಪು ಬಂದಿತ್ತು ಎಂದರು.
ಆದರೆ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಹೋಗಬಹುದು ಎಂದು ಟೀಕಿಸಿದರು. ವಿದ್ಯಾರ್ಥಿಗಳಲ್ಲಿ ಸಾಮರಸ್ಯ, ಸಮಭಾವ, ನಾವು ನಮ್ಮವರು, ಭಾರತೀಯರು ಎಂಬ ಭಾವನೆ ಇರಬೇಕೆಂಬ ಕಾರಣಕ್ಕಾಗಿ ಸಮವಸ್ತ್ರವನ್ನು ಜಾರಿಗೊಳಿಸಿದ್ದರು ಎಂದು ವಿವರಿಸಿದರು.