Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ- ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ವಿಧಿಸಿದೆ.

ಮೂಡಿಗೆರೆ ಬಿಜೆಪಿ(bjp) ಶಾಸಕ ಎಂ.ಪಿ.ಕುಮಾರಸ್ವಾಮಿ(mpkumarswamy)ಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ವಿಧಿಸಿದೆ.
ಒಟ್ಟು 8 ಕೇಸ್ಗಳಲ್ಲಿ 1.38 ಕೋಟಿ ಹಣ ಪಾವತಿಸಬೇಕು. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಆದೇಶ ಹೊರಡಿಸಿದ್ದಾರೆ. ಎಂ.ಪಿ.ಕುಮಾರಸ್ವಾಮಿ ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಬೌನ್ಸ್ ಆಗಿತ್ತು.
ಈ ಸಂಬಂಧ ಹೂವಪ್ಪಗೌಡ ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.
ಸಾಲ‌ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ. ಇದನ್ನೂ ಓದಿ : – ಮಹಿಳಾ ಐಪಿಎಲ್ ಹರಾಜು- ರೂ. 3.4 ಕೋಟಿಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂದಾನ!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!