Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಡಿಸಿಎಂ ತಗೊಂಡು ಏನ್ ಮಾಡಬೇಕು ಆದರೆ ಲಿಂಗಾಯತರು ಸಿಎಂ ಆಗಬೇಕು..!!

ದಾವಣಗೆರೆ : ಕಾಂಗ್ರೆಸ್‌ನಲ್ಲಿ ಡಿಸಿಎಂ ಕೂಗು ಎದ್ದಿತ್ತು. ಆದರೆ ಈಗ ಲಿಂಗಾಯತ ಸಿಎಂ ಕೂಗು ಎದ್ದಿದೆ. ಡಿಸಿಎಂ ತಗೊಂಡು ಏನ್ ಮಾಡಬೇಕು ಆದರೆ ಲಿಂಗಾಯತರು ಸಿಎಂ ಆಗಬೇಕು ಎಂದು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನೇರವಾಗಿಯೇ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ. ಲಿಂಗಾಯತ ಅಧಿಕಾರಿಗಳಿಗೆ ಪ್ರಮುಖ ಹುದ್ದೆಗಳೇ ಸಿಗುತ್ತಿಲ್ಲ ಎಂದು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ

ನಿಜಲಿಂಗಪ್ಪ, ಜೆ.ಎಚ್.ಪಾಟೇಲರು ಇದ್ದಾಗ ಎಲ್ಲರೂ ಚೆನ್ನಾಗಿದ್ದರು. ಈಗ ನಮ್ಮವರು ಕಂಗಾಲಾಗಿದ್ದಾರೆ. ಸರ್ಕಾರದ ಆಯಾಕಟ್ಟಿನ ಪ್ರಮುಖ ಹುದ್ದೆಗಳು ನಮ್ಮ ಸಮಾಜದವರಿಗೆ ಕೊಟ್ಟಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಸಮುದಾಯವರಿಗೆ ಮಣೆ ಹಾಕುತ್ತಿದ್ದಾರೆ ಎಂದು ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಬೆಂಗಳೂರಿ‌ನಲ್ಲಿ ವೀರಶೈವ ಮಹಾಸಭಾದ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಭಾಷಣ ಮಾಡುವಾಗ ಸತ್ಯವನ್ನು ಹೇಳಿದ್ದೇ‌ನೆ. ಮುಖ್ಯವಾದ ಹುದ್ದೆಗಳನ್ನು ಬಹಳಷ್ಟು ಜನರಿಗೆ ಕೊಟ್ಟಿಲ್ಲ. ಇದರ ಬಗ್ಗೆ ನಾನು ಯಾವುದೇ ಮಂತ್ರಿಗಳ ಬಳಿ ಹೇಳಲು ಹೋಗಿಲ್ಲ. ಡಿಸಿಎಂ ತೆಗೆದುಕೊಂಡು ಏನು ಮಾಡಬೇಕು. ಆದರೆ ಸಿಎಂ ಆಗಬೇಕು. ಯಾವಾಗಲೂ ಸಿಎಂ ಹುದ್ದೆಗೆ ನಮ್ಮ ಪ್ರಸ್ತಾಪ ಇದ್ದೇ ಇರುತ್ತದೆ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!