ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸಚಿವ ಸಂಪುಟ ವಿಸ್ತರಣೆಯಾಗಿದೆ. ಬಿಜೆಪಿ (BJP) ಮತ್ತು ಶಿವಸೇನೆ (Shiv Sena) ಬಣದ ತಲಾ 9 ಮಂದಿಯಂತೆ ಒಟ್ಟು 18 ಶಾಸಕರು ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಏಕ್ ನಾಥ್ ಶಿಂಧೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು.
ಸುಮಾರು 40 ದಿನಗಳ ಬಳಿಕ ಇಂದು ಬೆಳಗ್ಗೆ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಸಂಪುಟ ವಿಸ್ತರಣೆ ಸಮಾರಂಭಕ್ಕೂ ಮುನ್ನ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಪಾಳಯದ ಶಾಸಕರನ್ನು ಭೇಟಿ ಮಾಡಿದರು. 55 ಶಿವಸೇನಾ ಶಾಸಕರ ಪೈಕಿ 40 ಶಾಸಕರು ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ್ದಾರೆ.
ಜೂನ್ನಲ್ಲಿ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂಪುಟ ವಿಸ್ತರಣೆ ವಿಳಂಬದ ಬಗ್ಗೆ ಪ್ರತಿಪಕ್ಷಗಳು ಟೀಕಿಸಿದ್ದವು. ಇದನ್ನೂ ಓದಿ : – ಹಿರಿಯ ಪತ್ರಕರ್ತ ಜಿ.ಎಸ್ ರಂಗನಾಥ್ ರಾವ್ ಅವರ “ಆ ಪತ್ರಿಕೋದ್ಯಮ” ಕೃತಿ ಬಿಡುಗಡೆ
ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರರೊಂದಿಗೆ ಸಂಭಾವ್ಯ ಸಚಿವರ ಹೆಸರುಗಳನ್ನು ಚರ್ಚಿಸಲು ಹಲವಾರು ಬಾರಿ ದೆಹಲಿಗೆ ತೆರಳಿದ್ದರು. ಇಂದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿಯಿಂದ ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂತಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಡೆ, ರಾಧಾ ಕೃಷ್ಣ ವಿಖೆ ಪಾಟೀಲ್, ರವೀಂದ್ರ ಚೌಹಾಣ್, ಮಂಗಲ್ ಪ್ರಭಾತ್ ಲೋಧಾ, ವಿಜಯಕುಮಾರ್ ಗಾವಿತ್ ಮತ್ತು ಅತುಲ್ ಸೇವ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಶಿವಸೇನೆಯಿಂದ ದಾದಾ ಭೂಸೆ, ಸಂದೀಪನ್ ಬುಮ್ರೆ, ಉದಯ್ ಸಮಂತ್, ತಾನಾಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ಕೇಸರ್ಕರ್, ಗುಲಾಬ್ರಾವ್ ಪಾಟೀಲ್, ಸಂಜಯ್ ರಾಥೋಡ್ ಮತ್ತು ಶಂಭುರಾಜೇ ದೇಸಾಯಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ : – BREAKING ಸಂಜೆಯೊಳಗೆ ಬಿಹಾರ ಸರ್ಕಾರದ ಭವಿಷ್ಯ ನಿರ್ಧಾರ- ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್