ನೂಪುರ್ ಶರ್ಮಾ (NUPUR SHARMA) ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಸ್ಥಳೀಯ ಟೇಲರ್ ಅನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ತಾನದಲ್ಲಿ ನಡೆದಿದೆ. 10 ದಿನಗಳ ಹಿಂದೆ ಟೇಲರ್ ಕನ್ಹಯ್ಯಾ ಲಾಲ್ ತೇಲಿ (KANNAIAH LAL THELI) ಎಂಬುವರು ಈ ಪೋಸ್ಟ್ ಮಾಡಿದ್ದರು. ಅಂದಿನಿಂದ ಈತನಿಗೆ ಬೆದರಿಕೆಗಳು ಬರುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ಕೂಡ ದಾಖಲಿಸಿದ್ದರು.
ಇಂದು ಕನ್ಹಯ್ಯಾ ಅವರ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲವು ಬಾರಿ ಹಲ್ಲೆ ನಡೆಸಿ ಕತ್ತು ಸೀಳಿದ್ದಾರೆ. ಈ ಸಂಪೂರ್ಣ ದಾಳಿಯ ವೀಡಿಯೋ ಆನ್ಲೈನ್ನಲ್ಲಿ ದುಷ್ಕರ್ಮಿಗಳು ಪೋಸ್ಟ್ ಮಾಡಿದ್ದಾರೆ.
40 ವರ್ಷದ ಕನ್ಹಯ್ಯಾಲಾಲ್ ತೇಲಿ ಧನ್ಮಂಡಿಯಲ್ಲಿರುವ ಭೂತಮಹಲ್ ಬಳಿ ಸುಪ್ರೀಂ ಟೈಲರ್ಸ್ ಹೆಸರಿನ ಅಂಗಡಿಯನ್ನು ಹೊಂದಿದ್ದಾರೆ. ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ದಾಳಿ ನಡೆಸಿದ್ದಾರೆ. ಇದನ್ನೂ ಓದಿ – ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ – ಮಂಡ್ಯ ಕೂಡ ನನ್ನ ಬಿಡಲ್ಲ ..! ಸುಮಲತಾ ಅಂಬರೀಶ್
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ (ASHOK GEHLOT) ಈ ಘಟನೆಯನ್ನು ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಘಟನೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ –ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನದಿಂದ ಕೆಳಗಿಳಿದ ಮುಖೇಶ್ ಅಂಬಾನಿ- ಪುತ್ರ ಆಕಾಶ್ ಗೆ ಸಾರಥ್ಯ