ಕೋವಿಡ್ ನಿರ್ಬಂಧಗಳ ಹಿನ್ನಲೆಯಲ್ಲಿ ಬರೊಬ್ಬರಿ 2 ವರ್ಷಗಳ ಚಾರ್ ಧಾಮ್ ಯಾತ್ರೆ ಆರಂಭಗೊಂಡಿದ್ದು ಪವಿತ್ರ ಕ್ಷೇತ್ರಗಳಿಗೆ ಭಕ್ತರ ಪ್ರವಾಹವೇ ಹರಿದು ಬರುತ್ತಿದೆ.
ಈ ವರೆಗೂ 28 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಚಾರ್ ಧಾಮ್‌ಗಳಲ್ಲಿ ಒಂದಾದ ಕೇದಾರನಾಥ ದೇವಾಲಯಕ್ಕೆ ಅಭೂತಪೂರ್ವ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಇಂಡೋ-ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ಅನ್ನು ಶುಕ್ರವಾರ ಜನಸಂದಣಿ ನಿರ್ವಹಣೆಗಾಗಿ ನಿಯೋಜಿಸಲಾಗಿದೆ. ಇದನ್ನೂ ಓದಿ : – ಕ್ಷಣಾರ್ಧದಲ್ಲಿಯೇ ಪ್ರಾಣಾಪಾಯದಿಂದ ಪಾರಾದ ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ
ಚಾರ್ ಧಾಮ್ ಯಾತ್ರೆ ಆರಂಭವಾದಾಗಿನಿಂದ ಈವರೆಗೂ ಕೇದಾರನಾಥಕ್ಕೆ ತೆರಳುತ್ತಿದ್ದ 28 ಪ್ರವಾಸಿಗರು ವಿವಿಧ ಕಾರಣಗಳಿಂದ ಸಾವನ್ನಪ್ಪಿದ್ದಾರೆ. ಪ್ರತೀಕೂಲ ಹವಾಮಾನ, ಅನಾರೋಗ್ಯ ಸೇರಿದಂತೆ ವಿವಿಧ ಸಮಸ್ಯೆಗಳಿಂದ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : – ಕಬಿನಿಯಲ್ಲಿ 5 ಹುಲಿಗಳ ದರ್ಶನ – ಪುಳಕಿತರಾದ ಪ್ರಾಣಿ ಪ್ರಿಯರು