ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ 40% ಟೆಂಡರ್ ಕಮಿಷನ್ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿ ಗುತ್ತಿಗೆದಾರರ ಸಂಘಕ್ಕೆ ಕೇಂದ್ರದ ಗೃಹ ಸಚಿವಾಲಯದಿಂದ ಕರೆ ಬಂದಿದ್ದು, ಸಂಪೂರ್ಣ ವರದಿ ನೀಡುವಂತೆ ಸೂಚಿಸಿದೆ. ಆರೋಪದ ವಿಚಾರಣೆಗೆ ಇದೀಗ ಪ್ರಧಾನಿ ಕಚೇರಿಯೇ ಎಂಟ್ರಿ ಕೊಟ್ಟಿದೆ.
ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರಿಗೆ ಕೇಂದ್ರ ಗೃಹ ಇಲಾಖೆಯಿಂದ ಕರೆ ಬಂದ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಕಳೆದ ಶುಕ್ರವಾರ ಕೆಂಪಣ್ಣ ಅವರಿಗೆ ಕೇಂದ್ರ ಗೃಹ ಇಲಾಖೆಯಿಂದ ಫೋನ್ ಕರೆ ಬಂದಿತ್ತು. ಬೆಂಗಳೂರಿನ ಕಚೇರಿಗೆ ಆಗಮಿಸಿ ದಾಖಲೆಗಳನ್ನು ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಕಚೇರಿಗೆ ತೆರಳಿ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ : – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ದೆಹಲಿಗೆ
ಸರ್ಕಾರದ ಸಚಿವರು, ಶಾಸಕರು, ಮುಖ್ಯ ಇಂಜಿನಿಯರ್ಗಳ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘವು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ನಾಲ್ಕೈದು ಸಚಿವರು, ಸುಮಾರು 20 ಶಾಸಕರು, ಐದಾರು ಮುಖ್ಯ ಇಂಜಿನಿಯರ್ಗಳ ವಿರುದ್ಧ ದಾಖಲೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದಾಖಲೆಗಳ ಸಂಗ್ರಹ ಮಾಡಿಕೊಂಡು ಗೃಹ ಸಚಿವಾಲಯ ತಿಳಿಸಿದ ದಿನದಂದು ಅವುಗಳನ್ನು ಕಳಿಸಿಕೊಡಲು ಸಂಘವು ನಿರ್ಧರಿಸಿದೆ. 2021ರ ಜುಲೈ 7ರಂದು ಪ್ರಧಾನಿ ಸಚಿವಾಲಯಕ್ಕೆ 40% ಕಮಿಷನ್ ಕುರಿತು ರಾಜ್ಯ ಗುತ್ತಿಗೆದಾರರ ಸಂಘದಿಂದ ದೂರು ನೀಡಲಾಗಿತ್ತು.
ಇದನ್ನೂ ಓದಿ : – ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾದ ರಾಜ್ಯ ಸರ್ಕಾರ