ಕಬ್ಬಿ (Sugar cane) ನ ಉಪ ಉತ್ಪನ್ನವಾದ ಎಥೆನಾಲ್ ಲಾಭಾಂಶವನ್ನು ರೈತರಿ (Farmers) ಗೆ ನೀಡುವ ಸಂಬಂಧ ಸರ್ಕಾರ ಈಚೆಗೆ ನಿರ್ಧಾರ ಕೈಗೊಂಡಿತ್ತು. ಅದರಂತೆ ಇಂದು ಆದೇಶ ಹೊರಡಿಸಿದ್ದು, ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಸಂಬಂಧ ಸರ್ಕಾರ ತಿಳಿಸಿದೆ.
ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಬೇಕು ಎಂದು ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದರು. ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ (Shankar patil munekoppa) ಡಿ.5ರಂದು ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಘೋಷಣೆ ಮಾಡಿದ್ದು, ಅದೇ ಪ್ರಕಾರವಾಗಿ ಆದೇಶ ಹೊರಡಿಸಲಾಗಿದೆ. ಇದನ್ನು ಓದಿ : – ಕಾಂಗ್ರೆಸ್ ನವರು ದಲಿತರನ್ನ ಭಿಕ್ಷುಕರನ್ನಾಗಿ ಮಾಡಿದ್ದಾರೆ – ಆರಗ ಜ್ಞಾನೇಂದ್ರ
ಎಥೆನಾಲ್ ಉತ್ಪಾದಿಸುವ ರಾಜ್ಯದ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರವು 2022-23ನೇ ಸಾಲಿಗೆ ನಿಗದಿಪಡಿಸಿರುವ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯ ಜೊತೆಗೆ ಪ್ರತಿ ಮೆಟ್ರಿಕ್ ಟನ್ ವೊಂದಕ್ಕೆ 50 ರೂ. ಹೆಚ್ಚುವರಿಯಾಗಿ ಪಾವತಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : – ಎಂಸಿಡಿ ಚುನಾವಣೆ ಫಲಿತಾಂಶ ಪ್ರಕಟ- ಎಎಪಿಗೆ 134, ಬಿಜೆಪಿ 104, ಕಾಂಗ್ರೆಸ್ ಗೆ 9 ಸ್ಥಾನ