ಗೃಹ ಸಚಿವರ ಸರ್ಕಾರಿ ಮನೆ ಬಳಿ ಎಬಿವಿಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (prathap reddy ) ಭೇಟಿ ನೀಡಿದ್ದಾರೆ.
ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ನಡೆದ ಸ್ಥಳ ಪರಿಶೀಲಿಸಿದ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ( sandeep patil ) ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಯನ್ನು ಗೃಹ ಸಚಿವರ ನಿವಾಸದ ಒಳಗೆ ಕರೆಸಿಕೊಂಡು ಸಂದೀಪ್ ಪಾಟೀಲ್ ತರಾಟೆಗೆ ತೆಗೆದುಕೊಂಡರು. ಇದನ್ನು ಓದಿ :- ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್ ನೇಮಕ
ಗೃಹ ಸಚಿವರ ಮನೆ ಬಳಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಕಮೀಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿ ಇದು ಒಪ್ಪಿಕೊಳ್ಳುವಂತ ವಿಚಾರ ಅಲ್ಲ. ಈ ಬಗ್ಗೆ ಮೊದಲೇ ಮುನ್ಸೂಚನೆ ಅರಿತು ಕೊಳ್ಳಬೇಕಿತ್ತು, ಅದು ನಮ್ಮಿಂದ ಆಗಿಲ್ಲ ಎಂದು ಭದ್ರತಾ ವೈಫಲ್ಯವನ್ನ ಒಪ್ಪಿಕೊಂಡಿದ್ದಾರೆ.
ಇದನ್ನು ಓದಿ :- ಸಿಇಟಿ ಫಲಿತಾಂಶ ಪ್ರಕಟ- ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಅಪೂರ್ವ ಟಂಡನ್ ಟಾಪರ್