ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಘೋಷಣೆ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್ ನೀಡುವ ಸಾಧ್ಯತೆ ಕಂಡುಬಂದಿದೆ. ಇದೀಗ ಐದು ಗ್ಯಾರಂಟಿಗಳ ಹೊರೆ ತಗ್ಗಿಸಲು ಅಬಕಾರಿ ಸುಂಕ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು ಗ್ಯಾರಂಟಿ ಯೋಜನೆಗಳು ಘೋಷಣೆ ಆದ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಕರ್ನಾಟಕದಲ್ಲಿ ಮದ್ಯದ ದರವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಅದರಂತೆ, ಪ್ರತಿ ಮದ್ಯದ ಬಾಟಲಿಯ ಮೇಲೆ 10ರಿಂದ 20 ರೂ.ಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಮದ್ಯದ ಬೆಲೆ ಹೆಚ್ಚಾಗುತ್ತಿರುವ ಸುದ್ದಿ ಕೇಳುತ್ತಿದ್ದ ಹಾಗೆ ಮದ್ಯ ಪ್ರೀಯರು ಫುಲ್ ಫೀಲಿಂಗ್ ಅಲ್ಲಿದ್ದಾರೆ…
ವರದಿ ; ವರ್ಷಿತ ತಾಕೇರಿ