ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಡಿ.30ಕ್ಕೆ ಮಂಡ್ಯದಲ್ಲಿ ಸಮಾವೇಶ ಆಯೋಜಿಸಿದೆ. ಹಳೆ ಮೈಸೂರು ಭಾಗದಲ್ಲಿ ಪ್ರಮುಖ ರಾಜಕೀಯ ಜಿದ್ದಜಿದ್ದಿನ ಜಿಲ್ಲೆಯಾದ ಮಂಡ್ಯ ಜಿಲ್ಲೆಯಲ್ಲಿ 5 ರಿಂದ 6 ಕ್ಷೇತ್ರಗಳನ್ನು ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿದ್ದು, ಈ ಸಮಾವೇಶಕ್ಕೆ ಗೃಹ ಸಚಿವ ಅಮಿತ್ ಶಾ ( AMIT SHAH ) ಆಗಮಿಸಲಿದ್ದಾರೆ.
ಡಿ.30ರಂದು ಮನ್ ಮುಲ್ ನ ಮೆಗಾ ಡೈರಿ ಉದ್ಘಾಟನೆಯನ್ನು ಅಮಿತ್ ಶಾ ಮಾಡಲಿದ್ದಾರೆ. ಸರ್ಕಾರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಬರುತ್ತಿರುವ ಅಮಿತ್ ಶಾ ಪಕ್ಷದ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಕನಿಷ್ಟ 5 ಕ್ಷೇತ್ರದಲ್ಲಿ ಬಿಜೆಪಿ ( BJP ) ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಹೈಕಮಾಂಡ್ ನಿಂದ ರಾಜ್ಯದ ನಾಯಕರಿಗೆ ಸೂಚನೆ ಬಂದಿದೆ. ಈ ಕಾರಣದಿಂದ ರಾಜ್ಯದ ನಾಯಕರು ಮಂಡ್ಯ ಜಿಲ್ಲೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.
ಇದನ್ನು ಓದಿ :- ಸಿಎಂ ಬೊಮ್ಮಾಯಿ ನಿವಾಸಕ್ಕೆ ಕೇಂದ್ರ ಸಚಿವ ಜೋಶಿ ಭೇಟಿ…!