ರಾಜ್ಯ ರಾಜಕೀಯದಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿರುವ ನಡುವಲ್ಲೇ ಸೋಮವಾರ ರಾತ್ರಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.
ಈ ಬೆಳವಣಿಗೆಯು ಇದೀಗ ಎಲ್ಲರಲ್ಲೂ ಕುತೂಹಲವನ್ನು ಹೆಚ್ಚಾಗುವಂತೆ ಮಾಡಿದೆ. ದೆಹಲಿಯಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಅವರು ಆಗಮಿಸಿದ್ದು, ಶಾ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ವಾಗತಿಸಿದರು. ಮೇ 3ರಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ ಅವರು ಬಸವ ಜಯಂತಿ ನಿಮಿತ್ತ ಅಣ್ಣ ಬಸವಣ್ಣರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ನಂತರ ನೃಪತುಂಗ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸುವ ಮೂಲಕ ವಿವಿಗೆ ಅಧಿಕೃತವಾಗಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದೇ ವೇಳೆ ಬಳ್ಳಾರಿಯ ವಿಧಿವಿಜ್ಞಾನ ಪ್ರಯೋಗಾಲಯವನ್ನು ವರ್ಚ್ಯುಯಲ್ ಆಗಿ ಉದ್ಘಾಟಿಸಲಿದ್ದಾರೆ.
ಇದರ ಜೊತೆಗೆ ಇ ಬೀಟ್ ಅಪ್ಲಿಕೇಷನ್ ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 12 ರ ನಂತರ ಸಾತನೂರು ಗ್ರಾಮಕ್ಕೆ ತೆರಳಿ ನ್ಯಾಟ್ ಗ್ರಿಡ್ ಕ್ಯಾಂಪಸ್ ಉದ್ಘಾಟಿಸಲಿದ್ದಾರೆ. ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ನಿವಾಸದಲ್ಲಿ ಗೌರವಾರ್ಥವಾಗಿ ಆಯೋಜಿಸಲಾಗಿರುವ ಭೋಜನ ಕೂಟದಲ್ಲಿ ಅಮಿತ್ ಶಾ ಭಾಗಿಯಾಲಿದ್ದಾರೆ. 40ಕ್ಕೂ ಹೆಚ್ಚು ಬಗೆಯ ಖಾದ್ಯಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಮುಖಂಡರನ್ನು ತಣಿಸಲಿವೆ. ಇದನ್ನು ಓದಿ:-ಬಸವಣ್ಣನವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ – ಬಸವ ಜಯಂತಿ ಶುಭಾಶಯ ಕೋರಿದ ಸಿಎಂ
ಪಂಜಾಬಿ, ಗುಜರಾತಿ ಹಾಗೂ ದಕ್ಷಿಣ ಭಾರತೀಯ ಶೈಲಿಯ ಭೋಜನ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು 350 ರಿಂದ 400 ಮಂದಿ ಭೋಜನ ಸ್ವೀಕರಿಸುವ ನಿರೀಕ್ಷೆಗಳಿವೆ ಎಂದು ಹೇಳಲಾಗುತ್ತಿದೆ.ಭೋಜನ ಕೂಟದ ಬಳಿಕ ಮಧ್ಯಾಹ್ನ 2.30ರ ಸುಮಾರಿಗೆ ರಾಜ್ಯ ಬಿಜೆಪಿ ಪದಾಧಿಕಾರಿಗಳು, ಕೋರ್ ಸಮಿತಿ ಮತ್ತು ಮೋರ್ಚಾ ಅಧ್ಯಕ್ಷರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ವಿಶೇಷವೆಂದರೆ ಈ ಸಭೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಗಮಿಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಇದನ್ನು ಓದಿ :- ಇವತ್ತಿಂದಲೇ ಡಿಕೆಶಿಯ ಕೊಳಕಿನ ಜಾಲ ಬಿಡಿಸ್ತೀನಿ – ಅಶ್ವಥ್ ನಾರಾಯಣ್ ಸವಾಲು