ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ. ಜೂನ್ 16 ರಿಂದ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ ಎಂದು ಹೇಳಿದೆ.
ಇದನ್ನೂ ಓದಿ : – ಚಿಕ್ಕಮಗಳೂರಿನಲ್ಲಿ ಮಳೆಯಿಂದಾಗಿ ಇನಾಂ ದತ್ತಾತ್ರೇಯ ಪೀಠದ ರಸ್ತೆ ಕುಸಿತ