ನೂತನ ಉಪಲೋಕಯುಕ್ತರಾಗಿ ನ್ಯಾಯಮೂರ್ತಿ ಕೆ.ಎನ್ ಫಣಿಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರಾಜಭವನದಲ್ಲಿ ನ್ಯಾಯಮೂರ್ತಿ ಕೆ.ಎನ್ ಫಣಿಂದ್ರ ಅವರಿಗೆ ಉಪಲೋಕಾಯುಕ್ತ ಪದವಿಯ ಪ್ರಮಾಣ ವಚನ ಭೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಅರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.
ಇದನ್ನು ಓದಿ :- ರಾಜ್ಯವನ್ನು ಎಲ್ಲಿಗೆ ಕೊಂಡೊಯ್ಯಬೇಕೆಂದು ಅಂದುಕೊಂಡಿದ್ದೀರಿ – ಹೆಚ್.ಡಿ ಕುಮಾರಸ್ವಾಮಿ