Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political News

‘ನನ್ನನ್ನೂ ಬಂಧಿಸಿ’ ಬಿಜೆಪಿ ನಾಯಕರಿಂದ ಪೋಸ್ಟರ್‌ ಅಭಿಯಾನ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಕರ ಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನ ಬೆನ್ನಲ್ಲೆ ‘ನನ್ನನ್ನೂ ಬಂಧಿಸಿ’ ಬಿಜೆಪಿ ನಾಯಕರ ಪೋಸ್ಟರ್‌ ಅಭಿಯಾನ ಮೂಲಕ ಕಾಂಗ್ರೆಸ್‌ ವಿರುದ್ಧ ಕಿಡಿಕಾರುತ್ತಿದ್ದಾರೆ.

ನಾನು ಕರಸೇವಕ.. ನನ್ನನ್ನೂ ಬಂಧಿಸಿ’ ಎಂಬ ಪೋಸ್ಟರ್‌ ಹಿಡಿದು ಪೊಲೀಸ್‌ ಠಾಣೆ ಎದುರು ಮಾಜಿ ಸಚಿವ ಸಿ.ಟಿ.ರವಿ ಗುರುವಾರ ಪ್ರತಿಭಟನೆ ನಡೆಸಿದ್ದರು. ಇದರ ಫೋಟೋವನ್ನು ಎಡಿಟ್‌ ಮಾಡಿ ಕಾಂಗ್ರೆಸ್‌ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

‘ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ.. ನನ್ನನ್ನೂ ಬಂಧಿಸಿ’ ಎಂದು ಸಿ.ಟಿ.ರವಿಗೆ ಕಾಂಗ್ರೆಸ್‌ ಠಕ್ಕರ್‌ ಕೊಟ್ಟಿದೆ. ‘ಸಿಟಿ ರವಿ ಅವರೇ ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ’ ಎಂದು ಮಾರ್ಮಿಕವಾಗಿ ನುಡಿದಿದೆ.

ಬಿಜೆಪಿ ಅಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಈ ಪೋಸ್ಟರ್‌ ಹಿಡಿದು ಕುಳಿತರೆ ಸೂಕ್ತ ಬಿಜೆಪಿಗರೆಲ್ಲರೂ “ನನ್ನನ್ನೂ ಬಂಧಿಸಿ“ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ  ಎಂದು ಎಕ್ಸ್‌ನಲ್ಲಿ ಬರೆದುಕೊಳ್ಳುವ ಮೂಲಕ ಕಾಂಗ್ರೆಸ್‌ ಪ್ರಶ್ನಿಸಿದೆ. 

ನಾನು ಪರಶುರಾಮನ ಮೂರ್ತಿಯ ಕಂಚನ್ನು ಕದ್ದಿದ್ದೇನೆ. ಸರ್ಕಾರಿ ಸಿಮೆಂಟ್‌ ಕದ್ದಿದ್ದೇನೆ. ನನ್ನನ್ನೂ ಬಂಧಿಸಿ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ಅವರ ಫೋಟೋ ಕೂಡ ಎಡಿಟ್‌ ಮಾಡಿ ಕಾಂಗ್ರೆಸ್‌ ಹಂಚಿಕೊಂಡಿದೆ. ನನ್ನನ್ನು ಬಂಧಿಸಿ ಎನ್ನುತ್ತಿರುವ ಸುನಿಲ್‌ ಕುಮಾರ್‌ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ? ರಾಮನ ಹೆಸರಲ್ಲಿ ರಾವಣನಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ ಎಂದು ಖಾರವಾಗಿ ಕಾಂಗ್ರೆಸ್‌ ಪ್ರಶ್ನಿಸಿದೆ.

ನಾನು 40% ಕಮಿಷನ್‌ ನುಂಗಿ ಸಂತೋಷ್‌ ಪಾಟೀಲ್‌ ಸಾವಿಗೆ ಕಾರಣನಾಗಿದ್ದೇನೆ. ನನ್ನನ್ನೂ ಬಂಧಿಸಿ ಎಂಬ ಪೋಸ್ಟರ್‌ ಹಿಡಿಸಿ ಮಾಜಿ ಸಚಿವ ಈಶ್ವರಪ್ಪಗೆ ತಿರುಗೇಟು ನೀಡಲಾಗಿದೆ. ಈಶ್ವರಪ್ಪ ಅವರು ಹಿಡಿಯಬೇಕಾದ ಪೋಸ್ಟರ್ ಇದು! ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ ಎಂದು ಎಕ್ಸ್‌ ಮೂಲಕ ತರಾಟೆಗೆ ತೆಗೆದುಕೊಂಡಿದೆ.

ನಾನು ಸಂಸತ್‌ ದಾಳಿಕೋರರಿಗೆ ಪಾಸ್‌ ಕೊಟ್ಟು ಸಹಕರಿಸಿದ್ದೇನೆ. ನನ್ನನ್ನೂ ಬಂಧಿಸಿ ಎಂದು ಸಂಸದ ಪ್ರತಾಪ್‌ ಸಿಂಹ ಅವರ ಕೈಯಲ್ಲಿ ಪೋಸ್ಟರ್‌ ಹಿಡಿಸಿ ಕಾಂಗ್ರೆಸ್‌ ಟಾಂಗ್‌ ಕೊಟ್ಟಿದೆ.

ಪ್ರತಾಪ್‌ ಸಿಂಹ ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ, ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ ಎಂದು ಕಿಡಿಕಾರಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!