ಸಂಜಯ್ ರಾವತ್ ಬಂಧನ – ಸಂಸತ್ತಿನಲ್ಲಿ ವಿಪಕ್ಷಗಳಿಂದ ಭಾರಿ ಗದ್ದಲ, ಕಲಾಪ ಮುಂದೂಡಿಕೆ

ಶಿವಸೇನೆ ನಾಯಕ ಸಂಜಯ್ ರಾವತ್ ( sanjay rawath ) ಬಂಧನ ಮತ್ತು ಕಾಂಗ್ರೆಸ್ ( congress )ಸಂಸದರ ಅಮಾನತು ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಪ್ರತಿಭಟನೆ ತೀವ್ರಗೊಳಿಸಿವೆ. ಸಂಸದರ ಅಮಾನತು ವಾಪಸ್ ಗೆ ಬಿಗಿಪಟ್ಟು ಹಿಡಿದ ಪರಿಣಾಮ ಕಲಾಪವನ್ನು ಮುಂದೂಡಲಾಗಿದೆ.


11 ಗಂಟೆಗೆ ಸದನ ಆರಂಭವಾಗುತ್ತಿದ್ದಂತೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಕಾಮನ್ ವೆಲ್ತ್ ( commonwelth ) ಕ್ರೀಡಾಕೂಟದಲ್ಲಿ ದೇಶಕ್ಕೆ ಪ್ರಶಸ್ತಿಗಳನ್ನು ತಂದ ಭಾರತೀಯ ಕ್ರೀಡಾ ಪಟುಗಳನ್ನು ಅಭಿನಂದಿಸಿದರು. ಮೀರಾಬಾಯಿ ಚಾನು, ಜೆರೆಮಿ ಲಾಲ್ರಿನ್ನುಂಗಾ ಮತ್ತು ಅಚಿಂತಾ ಶೆಯುಲಿ ಚಿನ್ನ ಗೆದ್ದರೆ, ಬಿಂದ್ಯಾರಾಣಿ ದೇವಿ ಮತ್ತು ಸಂಕೇತ್ ಸರ್ಗರ್ ಬೆಳ್ಳಿ ಮತ್ತು ಗುರುರಾಜ ಪೂಜಾರಿ ಕಂಚು ಪಡೆದರು. ಬಿರ್ಲಾ ಅವರು ಪದಕ ವಿಜೇತರು ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಆಟಗಾರರನ್ನು ಅಭಿನಂದಿಸಿದರು. ಈ ಆಟಗಾರರು ದೇಶದ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ರು. ಇದನ್ನು ಓದಿ :- ಹತ್ಯೆಗೀಡಾದ ಪ್ರವೀಣ್ , ಮಸೂದ್, ಫಾಝಿಲ್ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಿದ HDK


ಈ ನಡುವೆ ಪತ್ರಾಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನೆ ವಕ್ತಾರ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿದೆ. ಇದೇ ಕಾರಣಕ್ಕೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಶಿವಸೇನೆ ( shivasene )ಸಂಸದರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ಸಂಸದರು ಅಮಾನಗೊಂಡ ಸದಸ್ಯರ ಅಮಾನತು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ವೇಳೆ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಸಭಾಪತಿ ಓಂ ಬಿರ್ಲಾ ಅವರು, ಸದನದ ಘನತೆಯನ್ನು ಕುಗ್ಗಿಸುವ ಇಂತಹ ಪ್ರತಿಭಟನೆಗಳು ಒಳ್ಳೆಯದಲ್ಲ ಎಂದು ಹೇಳಿದ್ರು. ಪ್ರತಿಪಕ್ಷಗಳು ಮನವಿಗೆ ಕಿವಿಗೊಡದ ಹಿನ್ನೆಲೆಯಲ್ಲಿ ಸ್ಪೀಕರ್ ಸದನವನ್ನು ಮುಂದೂಡಿದ್ರು.

ರಾವತ್ ಬಂಧನ ವಿಚಾರವಾಗಿ ಮಾತನಾಡಿದ ಸಭಾಪತಿ ಎಂ ವೆಂಕಯ್ಯ ನಾಯ್ಡು ( venkaya naidu )ಈ ವಿಷಯಕ್ಕೂ ಸದನಕ್ಕೂ ಯಾವುದೇ ಸಂಬಂಧವಿಲ್ಲ. ತಮ್ಮ ಸ್ಥಾನಗಳಿಗೆ ಹಿಂತಿರುಗುವಂತೆ ಸದಸ್ಯರಿಗೆ ಮನವಿ ಮಾಡಿದರು. ಇದೇ ವೇಳೆ ಪ್ರತಿಪಕ್ಷದ ಇತರ ಸಂಸದರೂ ಬೆಲೆ ಏರಿಕೆಯಂತಹ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮತ್ತೆ ಗದ್ದಲ ಮುಂದುವರೆಸಿದರು. ನಂತರ ಶಿವಸೇನೆ ಹಾಗೂ ಟಿಎಂಸಿ ಸಂಸದರು ಸದನದ ಬಾವಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನು ಓದಿ :- ಬಿಜೆಪಿ ಪರಿಷತ್ ಅಭ್ಯರ್ಥಿಯಾಗಿ ಬಾಬೂರಾಬ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!