ರಾಜ್ಯದ ಆರ್ ಎಸ್ ಎಸ್ (RSS )ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್ ಎಸ್ ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ ಎಸ್ ಎಸ್ ಕಚೇರಿಗಳನ್ನು ಧ್ವಂಸಗೊಳಿಸುವುದಾಗಿ ವಾಟ್ಸಪ್ ಸಂದೇಶವೊಂದನ್ನು ತಮಿಳುನಾಡು ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕಳುಹಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಸಂಬಂಧ ವಾಟ್ಸಪ್ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆರೋಪಿತ ಸೆಂಥಿಲ್ ಎಂಬವನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.ಈ ರೀತಿಯಾಗಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳುಹಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : – ದ್ವಿತೀಯ ಪಿಯು ಪಠ್ಯ ಪರಿಷ್ಕರಣೆ – ರೋಹಿತ್ ಚಕ್ರತೀರ್ಥಗೆ ಕೊಕ್..!