ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ( soniya gandhi ) ಯನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ( ed ) ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ( congress )ಇಂದು ಮೌನ ಸತ್ಯಾಗ್ರಹ ಹಮ್ಮಿಕೊಂಡಿದೆ.
ಇಂದು ಬೆಳಗ್ಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸತ್ಯಾಗ್ರಹ ಆರಂಭಗೊಂಡಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಅನಗತ್ಯವಾಗಿ ವಿಚಾರಣೆ ನಡೆಸುವ ಮೂಲಕ ಸೋನಿಯಾ ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.
ಮಂಗಳವಾರ ಇ.ಡಿ ಮತ್ತೊಂದು ಸುತ್ತಿನ ವಿಚಾರಣೆಗೆ ಸೋನಿಯಾ ಗಾಂಧಿ ಅವರನ್ನು ಕರೆದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಒಂದು ದಿನ ಮೌನ ಸತ್ಯಾಗ್ರಹಹಮ್ಮಿಕೊಂಡಿದೆ. ಈ ಮೂಲಕ ಸೋನಿಯಾ ಗಾಂಧಿಗೆ ಬೆಂಬಲ ಸೂಚಿಸಲಿದೆ. ಇದನ್ನೂ ಓದಿ : – ಡಿಕೆಶಿ ಜೊತೆ ಜಿದ್ದಾಜಿದ್ದಿ- ಶಾಸಕ ಜಮೀರ್ ಅಹ್ಮದ್ ಗೆ ಹೈಕಮಾಂಡ್ ನೋಟಿಸ್
ಸತ್ಯಾಗ್ರಹ ದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಯುಟಿ ಖಾದರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಇದನ್ನೂ ಓದಿ : – ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧ ಗೆದ್ದು ಇಂದಿಗೆ 23 ವರ್ಷ – ಕೋಲಾರದಲ್ಲಿ ಕಾರ್ಗಿಲ್ ವಿಜಯೋತ್ಸವ ಜಾಥಾ