ಸುಪ್ರೀಂ ಕೋರ್ಟ್ (Supreme court) ನಲ್ಲಿ ಹಿಜಾಬ್ (Hijab) ಅಂತಿಮ ತೀರ್ಪು ಇರುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ನಗರದಲ್ಲಿ ಅಲರ್ಟ್ ಇರುವಂತೆ ಕಮೀಷನರ್ ಸೂಚನೆ ನೀಡಿದ್ದಾರೆ. ಆಯಾ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಬಂದೋಬಸ್ತ್ ಮಾಡುವಂತೆ ಸೂಚನೆ ನೀಡಿದ್ದಾರೆ.
ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ. ಈಗಾಗಲೇ ಪೊಲೀಸ್ ಹಿರಿಯ ಅಧಿಕಾರಿಗಳಿಂದ ಸಭೆ ನಡೆದಿದೆ. ಸಭೆಯಲ್ಲಿ ಬೆಂಗಳೂರಿನಲ್ಲಿ ಹೈಅಲರ್ಟ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಕೆ.ಜೆಹಳ್ಳಿ, ಡಿಜೆಹಳ್ಳಿ, ಶಿವಾಜಿನಗರ ಸೇರಿದಂತೆ ಹಲವೆಡೆ ಖಾಕಿ ಸರ್ಪಗಾವಲು ಇರುವಂತೆ ಸೂಚನೆ ನೀಡಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶದಲ್ಲಿ ನಿರಂತರ ಹೊಯ್ಸಳ ಗಸ್ತು ಇರುವಂತೆಯೂ ಸೂಚನೆ ನೀಡಲಾಗಿದೆ.
ಇದನ್ನೂ ಓದಿ :- ಬಿಜೆಪಿ ಸೇರಲು ನಿರಾಕರಿಸಿದ್ದರಿಂದ ಗಂಗೂಲಿಗೆ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿತಾ…?