Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ವ್ಯಾಲೆಂಟೈನ್ಸ್ ಡೇ ಹಿನ್ನೆಲೆ – ವಿಭಿನ್ನವಾಗಿ ಟ್ವೀಟ್ ಮಾಡಿ ಬಿಜೆಪಿ ಕಾಲೆಳೆದ ಕಾಂಗ್ರೆಸ್

40 ಪರ್ಸೆಂಟ್ ಲವ್ ಹ್ಯಾಷ್ ಟ್ಯಾಗ್ ಮೂಲಕ ಕಾಂಗ್ರೆಸ್ ಬಿಜೆಪಿಯ ಕಾಲೆಳೆದಿದೆ.

40 ಪರ್ಸೆಂಟ್ ಲವ್ ಹ್ಯಾಷ್ ಟ್ಯಾಗ್ ಮೂಲಕ ಕಾಂಗ್ರೆಸ್ (Congress) ಬಿಜೆಪಿ (BJP) ಯ ಕಾಲೆಳೆದಿದೆ. ಬಿಜೆಪಿಗರು ಶುದ್ಧ 40% ಪ್ರೇಮಿಗಳು,

40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!!

ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ…..!! ಬಿಜೆಪಿಗರದ್ದು ಗೋ ಪ್ರೀತಿಯಲ್ಲ, ಇದನ್ನೂ ಓದಿ : –  BREAKING – ದೆಹಲಿಯಲ್ಲಿರುವ BBC ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

Go ಪ್ರೀತಿ!! ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ! ಭಗ್ನ ಪ್ರೇಮಿಯೊಬ್ಬನ ಪ್ರಲಾಪಗಳು,

◆ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವುದು.
◆ಸಿಎಂ ಮನೆಗೆ ಕಲ್ಲು ಹೊಡೆಯುವುದು.
◆ರೈತರಿಗೆ ಅವಮಾನಿಸುವುದು.
ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸೆಲಿಂಗ್ ಅಗತ್ಯವಿದೆ! ಒಮ್ಮೆ ತಿರಸ್ಕಾರ ಭಾವ ಮೂಡಿದರೆ ಮತ್ತೆಂದೂ ಅಲ್ಲಿ ಪ್ರೀತಿಗೆ ಜಾಗವಿಲ್ಲ!

 

ಮಂಡ್ಯದಲ್ಲಿ ತಿರಸ್ಕಾರದ ಪ್ರೇಮವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವಾನಗಳು!

“ಪ್ರೀತಿ ಮಧುರ, ತ್ಯಾಗ ಅಮರ” ಕುರ್ಚಿಯೊಂದಿಗಿನ ಪ್ರೇಮದ ಸವಿಗಳಿಗೆಯ ನೆನಪು, ವಿರಹದ ನೋವು ಸದಾ ಕಾಡುತ್ತಿರುತ್ತದೆ.. ಈಶ್ವರಪ್ಪನವರೇ ತಮಗೆ ವಿರಹದ ನೋವು ಭರಿಸುವ ಶಕ್ತಿ ಸಿಗಲಿ!!  ಒಂದು ಮುತ್ತಿನ ಕತೆಯಲ್ಲಿ ಪ್ರೇಮಿಗೆ ಜಯ ಸಿಗಲಿಲ್ಲ! “ಸಚಿವ ಹುದ್ದೆ” ಎಂಬ ವೈಫಲ್ಯದಿಂದ ಭಗ್ನಪ್ರೇಮಿಯಾಗಿ ತಿರುಗುತ್ತಿರುವವರ ನೋವು ಜಗತ್ತಿನ ಕಣ್ಣಿಗೆ ಕಾಣುವುದಿಲ್ಲ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ : –  Amit Shah- ಕರ್ನಾಟಕದಲ್ಲಿ ಬಿಜೆಪಿಗೆ ಪೂರ್ಣ ಬಹುಮತ- ಅಮಿತ್ ಶಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!