ಕರ್ನಾಟಕದ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು. ಇದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ (Modi) ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ (Kempegowda) 108 ಅಡಿ ಎತ್ತರದ ಪ್ರಗತಿಯ ಪ್ರತಿಮೆಯನ್ನು ಅನಾವರಣಗೊಳಿಸಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು 2014ಕ್ಕೆ ಮೊದಲು ದೇಶದಲ್ಲಿ ಒಟ್ಟು 70 ವಿಮಾನ ನಿಲ್ದಾಣಗಳು ಇದ್ದವು. ಆದರೆ ಈಗ ಇದು 140ಕ್ಕೆ ಏರಿಕೆಯಾಗಿದೆ.
ಭಾರತದ ಅಭಿವೃದ್ಧಿಯಲ್ಲಿ ಸಂಪರ್ಕವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ವಾಯು ಸಂಪರ್ಕ ಮತ್ತು ಹೊಸ ವಿಮಾನ ನಿಲ್ದಾಣಗಳನ್ನು ರಚಿಸುವುದು ಈ ಸಮಯದ ಅಗತ್ಯವಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ (Terminal2 ) ಸೌಲಭ್ಯಗಳನ್ನು ಹೆಚ್ಚಿಸಲಿದೆ. ಬೆಳವಣಿಗೆಯನ್ನು ಸಾಧಿಸಲು ನಾವು ಭೌತಿಕ ಮತ್ತು ಸಾಮಾಜಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದ್ರು. ಬೆಂಗಳೂರು ‘ಸ್ಟಾರ್ಟ್-ಅಪ್’ ಮನೋಭಾವವನ್ನು ಪ್ರತಿನಿಧಿಸುತ್ತದೆ. ಪ್ರಪಂಚದಾದ್ಯಂತ, ಭಾರತವು ತನ್ನ ಸ್ಟಾರ್ಟ್ ಅಪ್ ಗಳಿಗೆ ಹೆಸರುವಾಸಿಯಾಗಿದೆ. ದೇಶದಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆಯಿಂದ ಕರ್ನಾಟಕಕ್ಕೂ ಲಾಭವಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲೂ ಸುಮಾರು 4 ಲಕ್ಷ ಕೋಟಿ ಹೂಡಿಕೆ ಕರ್ನಾಟಕದಲ್ಲಿ ಆಗಿದೆ.
ಇದು ಅಭಿವೃದ್ಧಿಯ ಸಂಕೇತ ಎಂದು ತಿಳಿಸಿದ್ರು. ಇಂದು ಕರ್ನಾಟಕಕ್ಕೆ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಿಕ್ಕಿದೆ. ಅದರೊಂದಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಉದ್ಘಾಟನೆಯಾಯಿತು ಇದು ಬೆಂಗಳೂರಿನ ಜನರ ಅಗತ್ಯವಾಗಿತ್ತು. ಒಂದೇ ಭಾರತ್ ಕೇವಲ ರೈಲು ಅಲ್ಲ. ಇಂದು ಮೇಡ್ ಇಂಡಿಯಾದ ನವ ಭಾರತದ ರೈಲು. ಇದು ಅಭಿವೃದ್ಧಿಯ ರೈಲು. ಭಾರತ ಅಭಿವೃದ್ಧಿ ಹೊಂದುತ್ತಿದೆ ಎನ್ನುವುದು ತೋರಿಸುವ ರೈಲು. ನಮ್ಮ ಸರ್ಕಾರ ರೈಲ್ವೇಗೆ ಕಾಯಕಲ್ಪ ನೀಡಲು ಆರಂಭಿಸಿದ್ದು ವಿಸ್ಟಾಡೋಮ್ ಪರಿಚಯಿಸಿದ್ದೇವೆ. ನಮ್ಮ ಸರ್ಕಾರದ ಅವಧಿಯಲ್ಲಿ ರೈಲುಗಳು ಮಾತ್ರವಲ್ಲ ನಿಲ್ದಾಣಗಳನ್ನು ಹೈಟೆಕ್ ಆಗುತ್ತಿದೆ. ಇದನ್ನೂ ಓದಿ : – ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮೋದಿ
ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣವನ್ನು ವಿಶ್ವದರ್ಜೆಗೆ ಏರಿಸಿದ್ದೇವೆ. ಯಶವಂತಪುರ ರೈಲು ನಿಲ್ದಾಣ ಅಭಿವೃದ್ಧಿಯಾಗುತ್ತಿದೆ ಎಂದು ಹೇಳಿದ್ರು. ಭಾರತದ ಅಭಿವೃದ್ಧಿಗೆ ಬೆಂಗಳೂರು ಕೊಡುಗೆಯಿದೆ. ವಿಮಾನ, ಹೆಲಿಕಾಪ್ಟರ್ ಗಳು ಇಲ್ಲಿ ತಯಾರಾಗುತ್ತಿದೆ. ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಕರ್ನಾಟಕದಲ್ಲಿ ಮುಂಚೂಣಿಯಲ್ಲಿದೆ. ಇಡೀ ವಿಶ್ವ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ ಭಾರತದಲ್ಲಿ ಯುಪಿಐ ಕ್ರಾಂತಿ ನಡೆಯುತ್ತಿದೆ. ಮೇಡ್ ಇನ್ ಇಂಡಿಯಾ 5 ಜಿ ಟೆಕ್ನಾಲಜಿ ಬಂದಿದೆ. ಇಡೀ ವಿಶ್ವದಲ್ಲಿ ಭಾರತ ವಿಭಿನ್ನವಾಗಿ ನಿಂತಿದೆ. ಇದಕ್ಕೆ ಬೆಂಗಳೂರು ಕೊಡುಗೆ ಇದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.
ಇದನ್ನೂ ಓದಿ : – ರಾಜೀವ್ ಗಾಂಧಿ ಹತ್ಯೆ ಮಾಡಿದ್ದ ಆರು ಹಂತಕರ ಬಿಡುಗಡೆಗೆ ಸುಪ್ರೀಂ ಆದೇಶ