ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ಬಿಬಿಎಂಪಿ ಚುನಾವಣೆ (BBMP Election) ಪ್ರಕ್ರಿಯೆ ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ (Congress) ಆಗ್ರಹ ಮಾಡಿದೆ. ಸರ್ಕಾರ ಮತ್ತೆ ಚುನಾವಣೆ ಮುಂದೂಡಲು ತೀರ್ಮಾನಿಸಿದರೆ ನ್ಯಾಯಾಲಯ ಛೀಮಾರಿ ಹಾಕಲಿದೆ.
ಸರ್ಕಾರ ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಮುಖಂಡರಾದ ಶಿವರಾಜ್ (Shivraj ) ಹಾಗೂ ಅಬ್ದುಲ್ ವಾಜಿದ್ (Abdul vajid) , ಕಳೆದ ಎರಡು ವರ್ಷಗಳಿಂದ ಸರ್ಕಾರ ಬಿಬಿಎಂಪಿ ಚುನಾವಣೆ ಮಾಡಿಲ್ಲ. ಇತ್ತೀಚಿಗಷ್ಟೇ ಸುಪ್ರೀಂ ಕೋರ್ಟ್ 7 ದಿನಗಳ ಒಳಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಿದ್ದಾರೆ. ಪ್ರತಿ ಬಾರಿ ಸರ್ಕಾರ ಚುನಾವಣೆಯನ್ನು ಮುಂದೂಡುತ್ತಲೇ ಬಂದಿದ್ದು ಇದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ :- ಪಿಎಫ್ಐ ಸಂಘಟನೆಯ ಕಬಂಧ ಬಾಹು ವಿಸ್ತರಿಸಲು ನಿಮ್ಮದೇ ಪ್ರೋತ್ಸಾಹ- ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
ಬಿಬಿಎಂಪಿಗೆ ಜನಪ್ರತಿನಿಧಿಗಳ ಅಗತ್ಯವಿದೆ. ಕಾಂಗ್ರೆಸ್ ನ ಅಧಿಕಾರ ವಿಕೇಂದ್ರೀಕರಣದ ಆಶಯಕ್ಕೆ ಈ ತೀರ್ಪು ಜಯ ಸಿಕ್ಕಂತಾಗಿದೆ. ಸ್ಥಳೀಯ ಸಂಸ್ಥೆಗಳನ್ನು ಉತ್ತೇಜಿಸಿ ಅವುಗಳನ್ನು ಬಲಪಡಿಸುವ ಯೋಚನೆ ಸರ್ಕಾರಕ್ಕಿಲ್ಲ. ಇವರಿಗೆ ಸ್ಥಳೀಯ ಸಂಸ್ಥೆಗಳ ಬಲಪಡಿಸುವ ಇಚ್ಛೆ ಇದ್ದಿದ್ದರೆ ಈ ಚುನಾವಣೆ ಮಾಡಲು 2 ವರ್ಷ ಬೇಕಾಗಿರಲಿಲ್ಲ. ಜನಪ್ರತಿನಿಧಿಗಳು ಇಲ್ಲದೇ ಬಿಬಿಎಂಪಿಯಲ್ಲಿ ಅಭಿವೃದ್ಧಿ ಯೋಜನೆಗಳು ಕುಂಠಿತವಾಗಿವೆ ಎಂದು ಆರೋಪಿಸಿದರು.
ಇದನ್ನು ಓದಿ :- ಗೃಹಸಚಿವರ ನಿವಾಸಕ್ಕೆ ನುಗ್ಗಿದ ಎಬಿವಿಪಿ ಕಾರ್ಯಕರ್ತರು- ಇದು ಭದ್ರತಾ ವೈಫಲ್ಯ ಎಂದು ಒಪ್ಪಿಕೊಂಡ ಪ್ರತಾಪ್ ರೆಡ್ಡಿ