Life Style

ಬೆಳಗಾವಿಯಲ್ಲಿರೋ ಡಿಕೆಶಿಗೆ ಬಿಗ್ ಶಾಕ್….!

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D. K SHIVKUMAR ) ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ನಡೆಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D. K SHIVKUMAR ) ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ನಡೆಸಿದೆ. ಆರ್ ಆರ್ ನಗರದಲ್ಲಿರೋ ಶಿಕ್ಷಣ ಸಂಸ್ಥೆ ಮೇಲೆ ದಾಳಿ ನಡೆಸಿರೋ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯಾಷನಲ್ ಎಜುಕೇಷನ್ ಫೌಂಡೇಶ್ ಮೇಲೆ ರೇಡ್ ನಡೆಸಿ ಸುಮಾರು 1 ಗಂಟೆಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿಸಿದ್ದು, ಇದೇ ಸಂದರ್ಭದಲ್ಲಿ ಇತ್ತ ಬೆಂಗಳೂರಿನಲ್ಲಿ ಸಿಬಿಐ ದಾಳಿ ನಡೆಸಿದೆ. ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಹಿಂದೆ ಕೂಡ ಡಿ ಕೆ ಶಿವಕುಮಾರ್‌ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ಅವರನ್ನು ಸದ್ಯ ವಿಚಾರಣೆ ನಡೆಸುತ್ತಿದೆ. ಡಿಕೆ ಶಿವಕುಮಾರ್‌ ಅವರು ನ್ಯಾಷನಲ್‌ ಎಜುಕೇಶನ್‌ ಫೌಂಡೇಶನ್‌ ಸಂಸ್ಥೆಯ ಚೇರ್ಮನ್‌ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ.
ದಾಳಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ‘ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್‌ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶಿಲ್ದಾರ್‌ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ನನ್ನ ವಿರುದ್ದ ಕೇಸ್‌ಗಳು ನಡೆಯುತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದ್ರೆ ನೀಡುತ್ತಿದ್ದಾರೆ ಎಂದು ಹೇಳಿದರು.

Left Bharat Jodo Yatra to appear before ED: DK Shivakumar reaches Delhi -  India Today

ಸಿಬಿಐ ದಾಳಿಯಿಂದ ನನಗೆ ಯಾವುದೇ ಭಯವಿಲ್ಲ, ನಾನು ತಪ್ಪು ಮಾಡಿಲ್ಲ. ಹೆಚ್‌ ವಿಶ್ವನಾಥ್ ಇತ್ತೀಚಿಗೆ ಹಣಕಾಸಿನ ಬಗ್ಗೆ ರಾಜರೋಷವಾಗಿ ಹೇಳಿದ್ದರು ಕೂಡ ಯಾರು ಈ ಬಗ್ಗೆ ಮಾತನಾಡಿಲ್ಲ. ಇದಲ್ಲದೇ ವಿರೋಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಬಿಜೆಪಿ ಮುಂದಾಗಿದ್ದು, ಈ ಬಗ್ಗೆ ನ್ಯಾಯಾಲಯ ಜನತೆಗಳ ಜೊತೆಗೆ ನಾವು ಹೋಗುತ್ತೆವೆ ಎಂದು ತಿಳಿಸಿದ್ರು.

ಇದನ್ನು ಓದಿ :- ವಿಧಾನಸಭೆ ಅಧಿವೇಶನ ಆರಂಭ- ಅಗಲಿದ ರಾಜಕೀಯ ನಾಯಕರಿಗೆ ಸಂತಾಪ ಸೂಚನೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!