ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ (Teachers Recruitment) ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಬಿಡುಗಡೆ ಮಾಡಿದೆ. ಇದಕ್ಕೆ ಕರ್ನಾಟಕ ಹೈಕೋರ್ಟ್ (High Court) ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಈ ಮಹತ್ವದ ಆದೇಶ ಹೊರಡಿಸಿದ್ದು, ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿ ಶಿಕ್ಷಕರಾಗುವ ಕನಸು ಕಾಣುತ್ತಿದ್ದವರಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.
ಆಯ್ಕೆ ವೇಳೆ ಶಿಕ್ಷಣ ಇಲಾಖೆ ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣನೆ ಪ್ರಶ್ನಿಸಲಾಗಿತ್ತು. ಇದರಿಂದ ಹಲವು ಅಭ್ಯರ್ಥಿಗಳನ್ನು ರಿಜೆಕ್ಟ್ ಮಾಡಲಾಗಿತ್ತು. ಇದನ್ನು ವಿರೋಧಿಸಿ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದು, ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ರವರಿದ್ದ ಏಕಸದಸ್ಯ ಪೀಠ, ಪ್ರಕಟಿಸಲಾಗಿರುವ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಆದೇಶಿಸಿದೆ. ಇದನ್ನು ಓದಿ :- ಫೆಬ್ರವರಿ 6 ರಂದು ಕರುನಾಡಿಗೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ..!
ಈ ಮೊದಲು ಶಾಲಾ ಶಿಕ್ಷಕರ ನೇಮಕಾತಿಗೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದ್ರೆ, ಇದೀಗ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೇ ರದ್ದುಗೊಳಿಸಿ ಆದೇಶಿಸಿದೆ.
• ಹೈ-ಕ ಭಾಗದಲ್ಲಿ 5000 ಹುದ್ದೆ ಮೀಸಲು ಪೈಕಿ 4187 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
• ಇಂಗ್ಲಿಷ್ ಭಾಷೆಯಲ್ಲಿ 1807 ಹುದ್ದೆ ಪೈಕಿ 1768 ಅಭ್ಯರ್ಥಿಗಳು ಆಯ್ಕೆ.
• ಗಣಿತ, ವಿಜ್ಞಾನ ಭಾಷೆಯಲ್ಲಿ 6500 ಪೈಕಿ 5450 ಅಭ್ಯರ್ಥಿಗಳು ಆಯ್ಕೆ.
• ಸಮಾಜ ವಿಜ್ಞಾನ ಭಾಷೆಯಲ್ಲಿ 4693 ಪೈಕಿ 4521 ಅಭ್ಯರ್ಥಿಗಳು ಆಯ್ಕೆ.
• ಜೀವವಿಜ್ಞಾನ ಭಾಷೆಯಲ್ಲಿ 2000 ಹುದ್ದೆ ಪೈಕಿ 1694 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಇದನ್ನು ಓದಿ :- ಲಕ್ಷ್ಮಿ ವಿರುದ್ಧ ರಮೇಶ್ ಜಾರಕಿಹೊಳಿ ವಿಷ ಕನ್ಯೆ ಪದ ಬಳಕೆಗೆ ಚನ್ನರಾಜ ಹಟ್ಟಿಹೊಳಿ ಆಕ್ಷೇಪ