ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಬಿಹಾರ ವಿದ್ಯಾರ್ಥಿ ಸಂಘಟನೆಗಳು ಇಂದು ರಾಜ್ಯವ್ಯಾಪಿ ಬಂದ್ ಗೆ ಕರೆ ನೀಡಿದ್ದಾರೆ.
ಆಲ್ ಇಂಡಿಯಾ ಅಸೋಸಿಯೇಷನ್ ನೇತೃತ್ವದ ಸಂಸ್ಥೆಗಳು ಈ ಯೋಜನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಕೋರಿದೆ. ಈ ಬಂದ್ ಕರೆಗೆ ಲಾಲೂ ಪ್ರಸಾದ್ ಯಾದವ್ ಅವರ ಪಕ್ಷ ಆರ್ಜೆಡಿ ಬೆಂಬಲವನ್ನು ನೀಡಿದೆ ಎಂದು ಬಿಹಾರ ಘಟಕದ ಅಧ್ಯಕ್ಷ ಜಗದಾನಂದ್ ಸಿಂಗ್ ಘೋಷಿಸಿ, ಅಲ್ಪಾವಧಿಯ ನೇಮಕಾತಿ ಯೋಜನೆಯು ರಾಷ್ಟ್ರದ ಯುವಜನರ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿದೆ ಎಂದು ಕಿಡಿಕಾರಿದರು.
ಅಗ್ನಿಪಥ್ ನೇಮಕಾತಿ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರನ್ನು ನಾವು ಬೆಂಬಲಿಸುತ್ತೇವೆ. ಸಶಸ್ತ್ರ ಪಡೆಗಳಲ್ಲಿ ಹೊಸ ಅಲ್ಪಾವಧಿ ನೇಮಕಾತಿ ಯೋಜನೆಯು ದೇಶದ ಯುವಕರ ಹಿತಾಸಕ್ತಿಯಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : – ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ – ಹರ್ಯಾಣದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ, ತೆಲಂಗಾಣದಲ್ಲಿ ರೈಲುಗಳಿಗೆ ಬ್ರೇಕ್