ಪಠ್ಯ ಪುಸ್ತಕ ವಿವಾದ ಕುರಿತಂತೆ ತುಮಕೂರಿನಲ್ಲಿ (Tumkuru)ಶಿಕ್ಷಣ ಸಚಿವರ ಮನೆಗೆ ಎನ್ಎಸ್ಯುಐನ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದಾರೆ. ಎನ್ಎಸ್ಯುಐನ (NSUI) ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ (Keerthi ganesh)ನೇತೃತ್ವದಲ್ಲಿ ಮುತ್ತಿಗೆ ಹಾಕಿದ್ದಾರೆ .
ಪಠ್ಯದಲ್ಲಿ ಕುವೆಂಪು (Kuvempu)ಅವಮಾನ ಮಾಡಿದ್ದಾರೆ ಎಂಬ ಆರೋಪ ಬಂದಿದೆ . ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (Bc.Nagesh) ನಿವಾಸದ ಮೇಲೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದಾರೆ . ಬಿ.ಸಿ ನಾಗೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ . ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ .ಇನ್ನೊಂದೆಡೆ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಸ್ ಎಸ್ ಯು ಐ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ವಾಹನಗಳನ್ನ ಅಡ್ಡಗಟ್ಟಿ ಬಿಜೆಪಿ ನಾಯಕರು ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ಮೂರ್ನಾಲ್ಕು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇದನ್ನೂ ಓದಿ : – ನಾವಿಬ್ಬರೂ ಒಂದಾಗದೇ ಇದ್ದರೆ ಬಿಜೆಪಿ ಅಭ್ಯರ್ಥಿ ಗೆಲ್ತಾರೆ – ಶರವಣ