ಆಗಾಗ್ಗೆ ತನ್ನ ದರ್ಪ ತೋರಿಸುತ್ತಾ ವಿವಾದಕ್ಕೆ ಗುರಿಯಾಗುತ್ತಿರುವ ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ, ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರಿಗೆ ಫೋನ್ ನಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಠಾಣೆಗೆ ಹೊಸದಾಗಿ ಚಾರ್ಜ್ ತೆಗೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ರವೀಶ್ ಗೆ ಆವಾಜ್ ಹಾಕಿದ್ದಾರೆ. ಏಕವಚನದಲ್ಲೇ ಅಸಾಂವಿಧಾನಿಕ ಪದಗಳನ್ನು ಬಳಸಿ ಮಾತನಾಡಿದ್ದಾರೆ. ಯಾರನ್ನ ಕೇಳಿ ಚಾರ್ಜ್ ತೆಗೆದುಕೊಂಡೆ, ಎಲ್ಲಿದ್ದೀಯಾ? ನಿನಿಗೆ ಬರ್ಬೇಡಾ ಅಂತ ಹೇಳಿದ್ದೆ ತಾನೆ? ಇದನ್ನು ಓದಿ :- ಕೊಟ್ರೆ ಸನ್ಮಾನ ಮಾಡುತ್ತೇವೆ ಕೊಡದೇ ಇದ್ರೆ ಹೋರಾಟ ಮಾಡುತ್ತೇವೆ – ಬಸನಗೌಡ ಪಾಟೀಲ್ ಯತ್ನಾಳ್
ನೀನು ವಾಪಸ್ ಹೋಗು, ಠಾಣೆಯಲ್ಲಿ ಇರಬೇಡ, ಮರ್ಯಾದೆಯಿಂದ ವಾಪಸ್ ಹೋಗೋ ಲೇ, ನಾನು ಹೇಳಿದ ಹಾಗೆ ಕೇಳು, ಬೇಕಾದ್ರೆ ರೆಕಾರ್ಡ್ ಮಾಡ್ಕೊ, ನಾಳೆನೇ ನಿನ್ನ ಎತ್ತಂಗಡಿ ಮಾಡಿಸ್ತೇನೆ ಎಂದು ಗದರಿದ್ದಾರೆ. ಮುಂದುವರಿದು ಐಜಿಗೆ ಎಷ್ಟು ಲಂಚ ಕೊಟ್ಟಿದ್ದೀಯಾ? ಯಾವನು ಐಜಿ? ಮೂಡಿಗೆರೆಗೆ ನಾನೇ ಎಲ್ಲ, ನನ್ನನ್ನು ನೋಡಲು ಬಂದ್ರೆ ಒದ್ದು ಓಡಿಸುತ್ತೇನೆ ಎಂದು ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ್ದಾರೆ.
ಇದನ್ನು ಓದಿ :- 4-5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂ ವರ್ಕ್ ಹಗುರಗೊಳಿಸಲು ಸರ್ಕಾರ ಚಿಂತನೆ- ನಾಗೇಶ್