ರೈತ (Farmer) ರ ಸಮಸ್ಯೆಗಳನ್ನು ಆಲಿಸದೆ, ಬೇಡಿಕೆಗಳನ್ನು ಈಡೇರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಮಂಡ್ಯದಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಅವರ ಪ್ರತಿಮೆಗೆ ರಕ್ತಾಭಿಷೇಕ ಮಾಡಿದ್ದಾರೆ.
ಕಬ್ಬು (Sugar cane) ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವಂತೆ ರೈತರು 52 ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರಕಾರದಿಂದ ಸೂಕ್ತ ಸ್ಪಂದನೆ ಸಿಗದಿರುವ ಹಿನ್ನೆಲೆ ರೈತ ಹೋರಾಟಗಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಮೆಗೆ ರಕ್ತವನ್ನು ಅಭಿಷೇಕ ಮಾಡುವ ಮೂಲಕ ಭಿನ್ನ ರೀತಿಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯ (Mandya) ದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರು ‘ರಕ್ತ ಹೋರಾಟ’ ನಡೆಸಿದ್ರು. ಇದನ್ನು ಓದಿ : – ರಾಮನಗರದಲ್ಲಿ ಅಶ್ವತ್ಥ ನಾರಾಯಣ ಮಂದಿರವನ್ನೂ ಕಟ್ಟಲಿ- ಡಿಕೆಶಿ ವ್ಯಂಗ್ಯ
ಸಿರಿಂಜ್ನಿಂದ ತಮ್ಮ ದೇಹದ ರಕ್ತ ತೆಗೆಸಿಕೊಂಡ ಹತ್ತಾರು ರೈತರು, ಬಸವರಾಜ ಬೊಮ್ಮಾಯಿ ಪ್ರತಿಮೆಯ ಮೇಲೆ ರಕ್ತ ಸುರಿದು, ಅಭಿಷೇಕ ಮಾಡಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಕ್ತಾಭಿಷೇಕ ಮಾಡಿದ ರೈತರನ್ನು ಪೊಲೀಸರು ಬಂಧಿಸಿ ಬಸವರಾಜ್ ಬೊಮ್ಮಾಯಿ ಅವರ ಪ್ರತಿಮೆಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ : – ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದಕೊಂಡ ಜಮೀರ್…! ದೆಹಲಿಗೆ ಹೈಕಮಾಂಡ್ ಬುಲಾವ್