Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!

BREAKING NEWS – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ, ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆ ಬೆನ್ನಲ್ಲೇ ಶ್ರೀಲಂಕಾದಲ್ಲಿ ಜನ ದಂಗೆಯೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಕುಟುಂಬ ಸಮೇತ ದೇಶ ಬಿಟ್ಟು ಮಾಲ್ಡೀವ್ಸ್ ಗೆ ಪರಾರಿಯಾಗಿದ್ದಾರೆ. .ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಶ್ರೀಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್ ನ ರಾಜಧಾನಿ ಮಾಲೆಗೆ ಹೊರಟಿದ್ದಾರೆ ಎನ್ನಲಾಗಿದೆ.


ಇತ್ತ ಶ್ರೀಲಂಕಾ ಅಧ್ಯಕ್ಷ ಹುದ್ದೆಗೆ ರಾಜಪಕ್ಸ ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಪ್ರಧಾನಿ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಇದೀಗ ಜನರ ಆಕ್ರೋಶಕ್ಕೆ ಕೊನೆಗೂ ಮಣಿದಿರುವ ರಾಜಪಕ್ಸ, ಜುಲೈ 13ರಂದು ರಾಜೀನಾಮೆ ನೀಡಲಿದ್ದಾರೆ ಎಂದು ಸ್ಪೀಕರ್ ಮಹಿಂದಾ ಯಪಾ ಅಬೆವರ್ಧನ ತಿಳಿಸಿದ್ದರು. ಆದರೆ ಅದಕ್ಕೂ ಮೊದಲೇ ರಾಜಪಕ್ಸ ದೇಶ ತೊರೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನು ಓದಿ : – ರಾಷ್ಟ್ರ ಲಾಂಛನಕ್ಕೆ ಅವಮಾನ – ಪ್ರಧಾನಿ ಮೋದಿ ವಿರುದ್ಧ ಪ್ರತಿಪಕ್ಷಗಳು ಕಿಡಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!