ಮಾಜಿ ಸಚಿವ ಜನಾರ್ದನ ರೆಡ್ಡಿ (JANARDHAN REDDY) ಬಿಜೆಪಿಯಲ್ಲಿ ಇರ್ತಾರೆ, ಅವರನ್ನು ಬಳಸಿಕೊಂಡು ನಾವು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BSY) ಹೇಳಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪೂರದಲ್ಲಿ ಮಾತನಾಡಿದ ಬಿ ಎಸ್ ವೈ ರೆಡ್ಡಿ ಗಂಗಾವತಿಯಲ್ಲಿ ಮನೆ ಮಾಡಿರುವುದರಿಂದ ಗೊಂದಲ ಉಂಟಾಗಿರಬಹುದು.
ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂಬುದನ್ನು ಪಕ್ಷ ನಿರ್ಧರಿಸಲಿದೆ. ಅವರ ಮೇಲೆ ಕೆಲವೊಂದು ಕೇಸ್ಗಳಿರುವುದರಿಂದ ಬಿಜೆಪಿಯಲ್ಲಿ ಮತ್ತೆ ಸಕ್ರಿಯವಾಗಿ ಪಾಲ್ಗೊಳ್ಳುವುದು ವಿಳಂಬವಾಗಿದೆ. ಜನಾರ್ದನ ರೆಡ್ಡಿಯವರ ಜತೆ ಈಗಾಗಲೇ ನಾನು ಮಾತನಾಡಿದ್ದೇನೆ. ಕೇಸ್ ಒಂದೊಂದೇ ಇತ್ಯರ್ಥವಾಗುತ್ತಿದ್ದು, ವರಿಷ್ಠರ ಜತೆ ಮಾತನಾಡಿ, ಅವರನ್ನು ಪಕ್ಷಕ್ಕೆ ಕರೆದುಕೊಳ್ಳಲಾಗುವುದು ಎಂದು ಹೇಳಿದ್ರು. ಇದನ್ನು ಓದಿ : – ಗಡಿಯಲ್ಲಿನ ಗಲಭೆ, ಪ್ರತಿಭಟನೆಗಳ ಬಗ್ಗೆ ನಿಗಾ ವಹಿಸಲು ಐಪಿಎಸ್ ಅಧಿಕಾರಿ ನೇಮಕಕ್ಕೆ ಸೂಚನೆ- ಬೊಮ್ಮಾಯಿ
ಕಾಂಗ್ರೆಸ್ (CONGRESS) ನವರು ತಮ್ಮಲ್ಲಿರುವ ಗೊಂದಲ ಬಗೆಹರಿಸಿಕೊಳ್ಳುವುದು ಬಿಟ್ಟು ಬಿಜೆಪಿ ಮೇಲೆ ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ.
ನಾನು ಈಗಾಗಲೇ ಮುಖ್ಯಮಂತ್ರಿಯಾದೇ ಎಂದು ಕಾಂಗ್ರೆಸ್ ನ ಕೆಲವರು ಹಗಲು ಕನಸು ಕಾಣುತ್ತಿರುವುದು ಸರಿಯಲ್ಲ. ಇನ್ನೂ ಹಗುರವಾಗಿ ಮಾತನಾಡಿದರೇ ಪ್ರಸಿದ್ದಿ ಪಡೆಯುತ್ತೇನೆ ಎನ್ನುವ ಭ್ರಮೆಯಲ್ಲಿ ಪ್ರಿಯಾಂಕ ಖರ್ಗೆ (Priyankh kharge) ಇದ್ದಾರೆ. ಹಾಗಾಗಿ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ ಎನ್ನುತ್ತಿದ್ದಾರೆ. ಅವರ ಮಾತಿನಲ್ಲಿ ಯಾವುದೇ ಹುರುಳಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಬಿಎಸ್ ವೈ ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ : – ಕೆಪಿಸಿಸಿ ಚುನಾವಣಾ ಸಮಿತಿ ರಚನೆ ಮಾಡಿದ ಹೈಕಮಾಂಡ್ …!