ಬಸವರಾಜ ಹೊರಟ್ಟಿ ಕಾರು ಅಪಘಾತ – ಬೈಕ್ ಸವಾರನಿಗೆ ಗಾಯ ಕಿಮ್ಸ್ ಗೆ ದಾಖಲು

ಹುಬ್ಬಳ್ಳಿ( huballi ) ಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಕಾರು ಅಪಘಾತವಾಗಿದೆ. ಬೈಕ್ ಸವಾರ ಕೆಂಚಪ್ಪಗೆ ಗಂಭೀರ ಗಾಯವಾಗಿದ್ದು, ಕಿಮ್ಸ್ ( kims )ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಕೆಂಚಪ್ಪ ಸವದತ್ತಿ ಮೂಲದ ಜೆಸಿಬಿ ಆಪರೇಟರ್ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವರಾಜ ಹೊರಟ್ಟಿ ( basavaraj horatti ) ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜ ಕ್ಯಾಂಪಸ್ನಲ್ಲಿ ಕಾರ್ಯಕ್ರಮವೊಂದು ಮುಗಿಸಿಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ನಡೆದು 10 ನಿಮಿಷದ ನಂತರ ಬಸವರಾಜ ಹೊರಟ್ಟಿ ಬೇರೆ ವಾಹನದಲ್ಲಿ ಸ್ಥಳದಿಂದ ಹೊರಟಿದ್ದಾರೆ. ಅಪಘಾತ ನಡೆದು ಅರ್ಧ ಗಂಟೆಯಾದರೂ ಘಟನಾ ಸ್ಥಳಕ್ಕೆ ಅಂಬ್ಯುಲೆನ್ಸ್ ಬರಲಿಲ್ಲ.

ಇದನ್ನು ಓದಿ : –  ಯಾವುದೇ ಕಾರಣಕ್ಕೂ ಅವಧಿ ಮುಗಿಯುವವರೆಗೆ ಸಿಎಂ ಬದಲಾವಣೆ ಇಲ್ಲ – ಕೆ ಪಿ ನಂಜುಂಡಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!