ಬಿಜೆಪಿಯಲ್ಲಿ ಯಾರಾದರೂ ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು ಎಂದು ಬಿಜೆಪಿಯ ಹಿರಿಯ ರಾಜಕಾರಣಿ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಈ ಬಗ್ಗೆ ಕೇಂದ್ರದ ತನಿಖಾ ಸಂಸ್ಥೆಗಳಿಂದ ತನಿಖೆಯಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ (DK SHIVAKUMAR )ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು “ಇಡೀ ದೇಶವೇ ತಲ್ಲಣಗೊಳ್ಳುವ ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದು, ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಇನ್ನು ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ಹಣ ನೀಡಬೇಕು ಎಂದು ಕೇಳಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಈ ಪ್ರಕರಣವನ್ನು ಕೇವಲ ಎಸಿಬಿ ಮಾತ್ರವಲ್ಲ, ಕೇಂದ್ರದ ತನಿಖಾ ಸಂಸ್ಥೆಗಳೂ ತನಿಖೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ಅವರ ಪಕ್ಷದ ಗೌರವ ಉಳಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಆದರೆ ಅವರಿಗೆ ರಾಜಕೀಯ ಬದ್ಧತೆ ಇದ್ದರೆ ರಾಜ್ಯದಲ್ಲಿ ನಡೆದಿರುವ ಅನೇಕ ಹಗರಣಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು. ಈ ಸರ್ಕಾರ ಹುಟ್ಟಿದ್ದೇ ಶಾಸಕರನ್ನು ಖರೀದಿ ಮಾಡಿ. ಶಾಸಕ ಶ್ರೀನಿವಾಸಗೌಡರು ವಿಧಾನಸಭೆಯಲ್ಲಿ ಸಚಿವ ಅಶ್ವಥ್ ನಾರಾಯಣ ಹಾಗೂ ಯೋಗೀಶ್ವರ್ ಅವರು 30 ಕೋಟಿ ಹಣ ನೀಡುವುದಾಗಿ ಹೇಳಿ 5 ಕೋಟಿ ಮುಂಗಡ ಕೊಟ್ಟು ಹೋಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.ಬಿ.ಸಿ. ಪಾಟೀಲ್ ಮತ್ತಿತರ ನಾಯಕರುಗಳು ಆಮಿಷ ಒಡ್ಡಿರುವ ಸಂಭಾಷಣೆ ಗಮನಿಸಿದ್ದೇವೆ. ಇದನ್ನೂಓದಿ :- ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ ? – ಸಿದ್ದರಾಮಯ್ಯ ಪ್ರಶ್ನೆ
ಹೆಬ್ಬಾರ್, ರಹೀಂ ಖಾನ್ ಅವರು ಈ ಬಗ್ಗೆ ಬಹಿರಂಗವಾಗಿಯೇ ಹೇಳಿದ್ದರು. ಅಂತಿಮವಾಗಿ ಬಿಜೆಪಿಯವರು ಆಪರೇಷನ್ ಕಮಲದಲ್ಲಿ ಯಶಸ್ವಿಯಾಗಿ ಈ ಸರ್ಕಾರವನ್ನು ರಚಿಸಿದ್ದಾರೆ. ಎಲ್ಲ ಅಕ್ರಮಗಳನ್ನು ಮುಖ್ಯಮಂತ್ರಿಗಳು ರಕ್ಷಣೆ ಮಾಡುತ್ತಿದ್ದಾರೋ ಅಥವಾ ಅವರ ಪಕ್ಷದವರು ರಕ್ಷಣೆ ಮಾಡುತ್ತಿದ್ದಾರೋ? ಆ ಮೂಲಕ ಸಂವಿಧಾನವನ್ನು ಸುಡಲು ನಿರ್ಧರಿಸಿದ್ದಾರೋ? ಎಲ್ಲಾ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳೇ ತ್ತರ ನೀಡಬೇಕು ಎಂದರು. ಕೇಂದ್ರದ ತನಿಖಾ ಸಂಸ್ಥೆಗಳು 24 ಗಂಟೆಗಳಲ್ಲಿ ಯತ್ನಾಳ್ ಅವರನ್ನು ವಶಕ್ಕೆ ಪಡೆದು ಯಾರು ಅವರ ಬಳಿ ಬಂದು ಲಂಚ ಕೇಳಿದ್ದರು ಎಂಬ ಮಾಹಿತಿ ಪಡೆದು, ಕೂಡಲೇ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು. ಇದನ್ನೂಓದಿ :- ನಮ್ಮ ಸಿದ್ದಾಂತ ನಂಬಿ ಯಾರು ಪಕ್ಷಕ್ಕೆ ಬರ್ತಾರೋ ಅವ್ರನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ – ಬೊಮ್ಮಾಯಿ