ಜನಾಕ್ರೋಶಕ್ಕೆ ಕೇಂದ್ರ ಸರ್ಕಾರ ( centerl goverment ) ಮಣಿದಿದೆ. ಅಕ್ಕಿ, ಗೋಧಿ ಸೇರಿದಂತೆ 14 ವಸ್ತುಗಳಿಗೆ GST ಹೇರುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ( nirmala seethraman) ಗೋಧಿ, ಮೊಸರು, ಅಥವಾ ಲಸ್ಸಿ, ಅಕ್ಕಿ, ಓಟ್ಸ್, ಹಿಟ್ಟು, ತೊಗರಿಬೆಳೆ, ಮಂಡಕ್ಕಿ, ರವೆ, ಜೋಳ, ಸಣ್ಣ ಗೋಧಿಗಳ ಮೇಲಿನ ಜಿಎಸ್ಟಿ ವಿನಾಯಿತಿಯನ್ನು ನೀಡಲಾಗಿದೆ. ಆದರೆ ಇದಕ್ಕೆ ಕಲವೊಂದು ಷರತ್ತು ವಿಧಿಸಲಾಗದೆ. ಈ ಎಲ್ಲಾ ವಸ್ತುಗಳ ಮೇಲೆ ಲೇಬಲ್ ಇದ್ದರೇ ಅಥವಾ ಪ್ಯಾಕ್ ಮಾಡಿದರೆ ಜಿಎಸ್ಟಿ ವಿನಾಯಿತಿ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಬಿಡಿಯಾಗಿ ಮಾರಿದಾಗ ಜಿಎಸ್ಟಿ ಅನ್ವಯವಾಗದೇ ಇರುವ ವಸ್ತುಗಳ ಪಟ್ಟಿ ಇಲ್ಲಿದೆ
ದ್ವಿದಳ ಧಾನ್ಯ/ ಬೇಳೆ
ಗೋಧಿ
ಸಣ್ಣ ಗೋಧಿ
ಓಟ್ಸ್
ಮೈದಾ
ಅಕ್ಕಿ
ಗೋಧಿ ಹಿಟ್ಟು
ಸೂಜಿ/ ರವಾ
ಕಡಲೆ ಹಿಟ್ಟು
ಮಂಡಕ್ಕಿ
ಮೊಸರು/ ಲಸ್ಸಿ
ಈ ನಿರ್ಧಾರದಲ್ಲಿ ಸಭೆಯಲ್ಲಿದ್ದ ಬಿಜೆಪಿ( bjp )ಯೇತರ ರಾಜ್ಯಗಳಾದ ಪಂಜಾಬ್, ಛತ್ತೀಸ್ಗಢ, ರಾಜಸ್ಥಾನ, ತಮಿಳುನಾಡು, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ಎಲ್ಲಾ ರಾಜ್ಯಗಳು ಈ ನಿರ್ಧಾರವನ್ನು ಒಪ್ಪಿಕೊಂಡಿವೆ. ಜಿಎಸ್ಟಿ (gst )ಕೌನ್ಸಿಲ್ನ ಈ ನಿರ್ಧಾರವು ಮತ್ತೊಮ್ಮೆ ಒಮ್ಮತದಿಂದ ಬಂದಿದೆ ಎಂದು ಜಿಎಸ್ಟಿ ದರ ಏರಿಕೆಯ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.
ಇದನ್ನು ಓದಿ : – ಇಂದಿನಿಂದ GST ಬರೆ – ಯಾವ ವಸ್ತುಗಳ ಮೇಲೆ ಹೆಚ್ಚಾಗಲಿದೆ ತೆರಿಗೆ?