ಪವಿತ್ರ ಅಮರನಾಥ (amaranatha ) ಯಾತ್ರೆ ಸಂದರ್ಭದಲ್ಲಿ ಮೇಘಸ್ಪೋಟದಿಂದಾಗಿ 12 ಜನ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (basavarj bommai) ಕಂಬನಿ ಮಿಡದಿದ್ದಾರೆ.
ಈ ಸಂಬಂಧ ಟ್ವೀಟ್ (tweet) ಮಾಡಿರುವ ಮುಖ್ಯಮಂತ್ರಿಗಳು ಮೇಘ ಸ್ಫೋಟದಿಂದಾಗಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಮೇಘ ಸ್ಫೋಟದಲ್ಲಿ ಜೀವ ಕಳೆದುಕೊಂಡ ಜನರ ಆತ್ಮಗಳಿಗೆ ಶಾಂತಿ ಸಿಗಲಿ. ಇವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ನೀಡಲಿ ಎಂದು ಟ್ವೀಟ್ ನಲ್ಲಿ ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ : – ಅಮರನಾಥ ಮೇಘಸ್ಫೋಟ- ಸಾವಿನ ಸಂಖ್ಯೆ 15ಕ್ಕೆ ಏರಿಕೆ 40 ಮಂದಿ ನಾಪತ್ತೆ