ಪಂಜಾಬ್ ನ ಮೊಹಾಲಿಯಲ್ಲಿರುವ ರಾಜ್ಯ ಗುಪ್ತಚರ ಇಲಾಖೆ ಕಚೇರಿ ಮೇಲೆ ನಡೆಸಲಾಗಿರುವ ದಾಳಿ ಪ್ರಕರಣದ ಹಿಂದೆ ಉಗ್ರರ ಕೈವಾಡ ಇರುವ ಶಂಕೆಗಳನ್ನು ಪಂಜಾಬ್ ಪೊಲೀಸರು ಇಂದು ನಿರಾಕರಿಸಿದ್ದಾರೆ.
ಗುಪ್ತಚರ ವಿಭಾಗದ ಕೇಂದ್ರ ಕಚೇರಿಯ ಮೇಲೆ ರಾಕೆಟ್ ಲಾಂಚರ್ ನಿಂದ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ, ಗಾಯಗಳು ಸಂಭವಿಸಿಲ್ಲ. ಆದರೆ ಕಟ್ಟದ ಗಾಜುಗಳು ಒಡೆದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ : – ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ
ಮೊಹಾಲಿಯ ಸೆಕ್ಟರ್ 77 ರಲ್ಲಿರುವ ಪಂಜಾಬ್ ಪೊಲೀಸ್ ಇಂಟೆಲಿಜೆನ್ಸ್ ಕಟ್ಟಡದಲ್ಲಿ ನಿನ್ನೆ ರಾತ್ರಿ 7:45ಕ್ಕೆ ಘಟನೆ ನಡೆದಿದೆ. ಮೊದಲಿಗೆ ಇದೊಂದು ಭಯೋತ್ಪಾದಕ ದಾಳಿ ಎಂದೇ ಹೇಳಲಾಗಿತ್ತು. ಆದರೆ ಮೊಹಾಲಿ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಭಯೋತ್ಪಾದಕರ ಕೃತ್ಯ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಭಗವಂತ್ ಮಾನ್ ಅವರು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ : – ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ – ಸಚಿವ ಬಿಸಿ ಪಾಟೀಲ್ ಸ್ಪಷ್ಟನೆ