ರಾಜ್ಯಾದ್ಯಂತ ಇಂದಿನಿಂದ SSLCಪರೀಕ್ಷೆ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಶುಭ ಕೋರಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಎಲ್ಲರ ಜೀವನದಲ್ಲೂ ಅತಿ ಮುಖ್ಯ ಪರೀಕ್ಷೆ. ಪರೀಕ್ಷೆ ಬರೆಯುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು- ಹೆಚ್.ಡಿ.ಕೆ
ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂಬುದು ನನ್ನ ಕಳಕಳಿ ಎಂದು ಟ್ವೀಟ್ ಮೂಲಕ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಮಾಜಿ ಸಿಎಂ ಯಡಿಯೂರಪ್ಪ
ವಿದ್ಯಾರ್ಥಿಗಳೇ, ಇದೊಂದು ಕಲಿಕೆಯ ಪ್ರಮುಖ ಘಟ್ಟ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಾವುದೇ ಗೊಂದಲಗಳಿಗೆ ತಲೆಕೆಡಿಸಿಕೊಳ್ಳದೇ ಪರೀಕ್ಷೆ ಎದುರಿಸಿ, ಶುಭವಾಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ಇದನ್ನು ಓದಿ :- ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ವೀರೋಚಿತ ಸೋಲು – ಮಹಿಳಾ ವಿಶ್ವಕಪ್ ನಿಂದ ಭಾರತ ಔಟ್