ಬಿಬಿಎಂಪಿ ಚುನಾವಣಾ (BBMP election) ಹಿನ್ನೆಲೆಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಅಭಿವೃದ್ಧಿ ನೆಪದಲ್ಲಿ ಮತ ಸೆಳೆಯಲು ಸಿಎಂ ಪ್ಲಾನ್ ಮಾಡಿದ್ದಾರೆ. ಇಂದು ರಾಜರಾಜೇಶ್ವರಿ ನಗರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ (Bommai) ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ನಡೆದಿರುವ ಕಾಮಗಾರಿಗೆ ಸಿಎಂ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಇತ್ತೀಚೆಗಷ್ಟೇ ಮಳೆ ಹಾನಿಯಿಂದ ರಾಜರಾಜೇಶ್ವರಿ ಕ್ಷೇತ್ರ ಬಾರೀ ಟೀಕೆಗೆ ಒಳಗಾಗಿತ್ತು. ಆರ್ ಆರ್ ನಗರ (RR nagar) ಕ್ಷೇತ್ರದ ಡ್ಯಾಮೇಜ್ ಕಂಟ್ರೋಲ್‌ಗೆ ಶಾಸಕ ಮತ್ತು ಸಚಿವ ಮುನಿರತ್ನ (Muniratna) ಮುಂದಾಗಿದ್ದಾರೆ. ಹೊಸ ಯೋಜನೆಗಳಿಗೆ ಚಾಲನೆ ನೀಡಿ ಜನರಲ್ಲಿ ಇಂಪ್ಯಾಕ್ಟ್ ಮೂಡಿಸಲು ಸಿಎಂ ಪ್ಲಾನ್ ಮಾಡಿದ್ದಾರೆ. ಮಧ್ಯಾಹ್ನ ಮೂರು ಗಂಟೆಗೆ ಆರ್ ಆರ್ ನಗರ ಕ್ಷೇತ್ರಕ್ಕೆ ಸಿಎಂ ಬೊಮ್ಮಾಯಿ ತೆರಳಲಿದ್ದಾರೆ. ಲಗ್ಗೇರಿಯಲ್ಲಿ ಕೊಳಗೇರಿ ನಿವಾಸಿಗಳಿಗೆ ಮನೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಮತ್ತು ಹಕ್ಕುಪತ್ರವನ್ನು ಸಿಎಂ ಬೊಮ್ಮಾಯಿ ವಿತರಿಸಲಿದ್ದಾರೆ. ನಂತರ 5.45 ಕ್ಕೆ ನೂತನ ಶಾಸಕರ ಕಚೇರಿಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಬಿಬಿಎಂಪಿ ಚುನಾವಣಾ ಹಿನ್ನೆಲೆ ಸಾಲು ಸಾಲು ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದನ್ನೂ ಓದಿ : – ನೆಲಮಂಗಲದಲ್ಲಿ ಆಂಬುಲೆನ್ಸ್ ಕಾರಿಗೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ