ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಿಟ್ಜರ್ ಲೆಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಟಿಗೂ ಮುನ್ನ ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿಯಾದರು. ಈ ವೇಳೆ ಜಗ್ಗಿ ವಾಸುದೇವ್ ಅವರು ಸಿಎಂ ಅವರ ಆರೋಗ್ಯವನ್ನು ವಿಚಾರಿಸಿದ್ರು. ಸಿಎಂ ಕಾಲು ನೋವಿನ ಬಗ್ಗೆ ಜಗ್ಗಿ ವಾಸುದೇವ್ ವಿಚಾರಿಸಿದ್ರು. ಇದನ್ನೂ ಓದಿ :- ವಿವಾದದ ಬಳಿಕ ಎಚ್ಚೆತ್ತುಕೊಳ್ಳದ ಸರ್ಕಾರ – ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಿಯುಸಿ ಪಠ್ಯ ಪರಿಷ್ಕರಣೆ!
ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರು ಜೊತೆಗಿದ್ದರು.
ಇದನ್ನೂ ಓದಿ :- ಭಾರತ ಸೇರಿ 16 ದೇಶಗಳಿಗೆ ಪ್ರಯಾಣ ಮಾಡಬೇಡಿ- ತನ್ನ ಪ್ರಜೆಗಳಿಗೆ ನಿರ್ಬಂಧ ಹೇರಿದ ಸೌದಿ ಅರೇಬಿಯಾ