ಇಂದಿನಿಂದ ಮೂರು ದಿನಗಳ ಕಾಲ ಸಿಎಂ ದೆಹಲಿ ಪ್ರವಾಸ

ಇಂದು ಬೆಂಗಳೂರಿನಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ ಸಿಎಂ ಬಸವರಾಜ್ ಬೊಮ್ಮಾಯಿ ( basavaraj bommai )ಒಟ್ಟು 3 ದಿವಸಗಳ ಕಾಲ ದೆಹಲಿ ( delhi) ಪ್ರವಾಸ ಮಾಡಲಿದ್ದಾರೆ.

ಇಂದು ಮಧ್ಯಾಹ್ನ 2 ಗಂಟೆಗೆ ಬಿಜೆಪಿ ಪಕ್ಷದಿಂದ ಆಯೋಜಿಸಿರುವ ಭೋಜನಕೂಟದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಭೋಜನಕೂಟದಲ್ಲಿ ಬಿಜೆಪಿ ( bjp) ಅಧ್ಯಕ್ಷ ಜೆಪಿ ನಡ್ಡ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರು ಭಾಗಿಯಾಗಲಿದ್ದು, ಇಂದು ರಾತ್ರಿ ದೆಹಲಿಯಲ್ಲಿ ಸಿಎಂ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ :- ಆಂಧ್ರ ಪ್ರದೇಶದಲ್ಲಿ ಅಪಘಾತ – ಬೆಂಗಳೂರಿನ ಇಬ್ಬರು ಪೊಲೀಸ್ ಸಿಬ್ಬಂದಿ, ಚಾಲಕ ಸಾವು

ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯುವ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರದ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ನಂತರ ಹಲವು ಕೇಂದ್ರ ಸಚಿವರ ಭೇಟಿ ಮಾಡಲಿದ್ದು, ರಾಜ್ಯದ ಹಲವು ಯೋಜನೆ ಬಗ್ಗೆ ಚರ್ಚೆ ಮಾಡಲಿದ್ದಾರೆ. ಸೋಮವಾರ ರಾತ್ರಿ ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದು, ಮಂಗಳವಾರವು ಕೇಂದ್ರ ಸಚಿವರುಗಳನ್ನ ಭೇಟಿ ಮಾಡಿ ಹಲವು ಯೋಜನೆಗಳ ಬಗ್ಗೆ ಚರ್ಚೆ ನಡೆಸಿ, ಮಂಗಳವಾರ ಸಂಜೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.

ಇದನ್ನೂ ಓದಿ :- ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!