ಇಂದು ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಭೇಟಿ ರದ್ದು

ಬೊಮ್ಮಾಯಿ ( basavaraj bommai) ಅವರು ಭೇಟಿ ನೀಡಬೇಕಾಗಿತ್ತು. ಆದರೆ ಬೆಂಗಳೂರಿಗೆ ತುರ್ತಾಗಿ ಬರಬೇಕಾಗಿರುವ ಕಾರಣ ಉತ್ತರಕನ್ನಡ ಜಿಲ್ಲೆ ಪ್ರವಾಸವನ್ನು ಸಿಎಂ ರದ್ದುಗೊಳಿಸಿದ್ದಾರೆ.

ಜಿಲ್ಲೆಯ ಭಟ್ಕಳ ತಾಲೂಕಿನ ಗೊರಟೆ ಗ್ರಾಮದಲ್ಲಿ ಕಡಲ ಕೊರೆತದಿಂದ ಆದ ಹಾನಿಯನ್ನು ವೀಕ್ಷಣೆ ಮಾಡಲು ಹೋಗಬೇಕಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರದ್ದು ಪಡಿಸಿದ್ದು, ಪ್ರವಾಹ ಪೀಡಿತ ಉಡುಪಿ ಜಿಲ್ಲೆಗೆ ಮಾತ್ರ ಭೇಟಿ ನೀಡಿ ಮಳೆಯಿಂದ ಉಂಟಾದ ಹಾನಿಯನ್ನು ವೀಕ್ಷಣೆ ಮಾಡಲಿದ್ದಾರೆ. ಇದನ್ನು ಓದಿ : –  ಮಡಿಕೇರಿಯಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ- ಪರಿಹಾರ ಚೆಕ್ ವಿತರಣೆ

ನಂತರ ಉಡುಪಿಯಲ್ಲಿ ಕರಾವಳಿ ಭಾಗದ ಅಧಿಕಾರಿಗಳೊಂದಿಗೆ ಪ್ರವಾಹ ಹಾನಿ ಕುರಿತು ಸಭೆಯನ್ನು ನಡೆಸಲಿದ್ದಾರೆ. ಆದರೆ, ಮುಂದಿನ 10 ದಿನಗಳ ಒಳಗೆ ಭೇಟಿ ಭಟ್ಕಳಕ್ಕೆ ಹೋಗಲಿದ್ದಾರೆ. ಈಗಾಗಲೇ ಮಳೆಯ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ತತ್ತರಿಸಿ ಹೋಗಿದೆ.

ಇದನ್ನು ಓದಿ : – ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವ ಪತನ ಕಾಣಲಿದೆ – ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!