ಕರಾವಳಿ, (karavali) ಕೊಡಗು, ಮಲೆನಾಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, (kodagu) ಉತ್ತರ ಕನ್ನಡ, ಉಡುಪಿ (udupi ) ಜಿಲ್ಲೆಗಳಲ್ಲಿ ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಹಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದೆ. ಮರಗಳು ಧರೆಗುರುಳಿವೆ. ರಸ್ತೆ, ಮನೆಗಳ ಮುಂದೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ (rajendra ) ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಇದನ್ನೂ ಓದಿ :- ಕಳಸ – ಹೊರನಾಡು ಸಂಪರ್ಕ ಕಡಿತ – ಬೆಳ್ತಂಗಡಿ ಶಾಲಾ, ಕಾಲೇಜುಗಳಿಗೆ ರಜೆ